ಮೈಸೂರು:
ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಲು ರಚಿಸಿರುವ ಅಧಿಕಾರಿಗಳ ತಂಡವು ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು,ಎಎಸ್‍ಐ, ಚೆಸ್ಕಾಂ ಮತ್ತು ನೋಡೆಲ್ ಅಧಿಕಾರಿಗಳು ಸೇರಿದಂತೆ ರಚಿಸಿರುವ ಮೂವರು ಅಧಿಕಾರಿಗಳುಳ್ಳ ತಂಡವು ಕೋವಿ ಡ್ ಚಿಕಿತ್ಸೆ ಸಂಬಂಧ ಖಾಸಗಿ ಆಸ್ಪತ್ರೆಗಳ ಚಲವಲನ ಬಗ್ಗೆ ನಿಗಾವಹಿಸಬೇಕು ಎಂದು ಹೇಳಿದರು.
ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಸರ್ಕಾರ ಸೂಚಿ ಸುವ ಸೋಂಕಿತರಿಗೆ ಮೀಸಲಿಟ್ಟಿವೆ.ಆದ್ದರಿಂದ ಯಾವುದೇ ಕಾರಣಕ್ಕೂ ಹಾಸಿಗೆಗಳ ಕೊರತೆ ಉಂಟಾಗದಂತೆ ಆಸ್ಪತ್ರೆಗೆ ಭೇಟಿ ನೀಡಿ ಹಾಸಿಗೆ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯಬೇಕು.ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಪಡಿಸಿರುವ ದರವನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಸೋಂಕಿತರ ಕುಟುಂಬಸ್ಥರಿಂದ ಮಾಹಿತಿ ಪಡೆಯ ಬೇಕು. ಸರ್ಕಾರ ನಿಗಧಿಪಡಿಸಿರುವ ದರಕ್ಕಿಂತ ಹೆಚ್ಚು ದರ ವಿಧಿಸಿದರೆ ಅದನ್ನು ವಾಪಸ್ಸು ಕೊಡಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವಿವಿಧ ಬಗೆಯ ಹಾಸಿಗೆ ಪಟ್ಟಿಯನ್ನು ಪ್ರತಿದಿನ ಆಸ್ಪತ್ರೆಯ ಮುಂಭಾಗ ಪ್ರಕಟಿಸಬೇಕು.ಕೋವಿಡ್-19 ತಗುಲಿ ಆಸ್ಪತ್ರೆಗೆ ದಾಖಲಾಗುವ ಪ್ರತಿಯೊಬ್ಬ ವ್ಯಕ್ತಿಗಳ ಸಂಪೂರ್ಣ ಮಾಹಿತಿಯ ನ್ನು ಎಸ್3 ಪೋರ್ಟಲ್‍ನಲ್ಲಿ ದಾಖಲಿಸುವುದನ್ನು ಗಮನಿಸಬೇಕು.ಪ್ರತಿ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಐಸಿಎಂಆರ್ ಸೂಚಿಸುವ ಚಿಕಿತ್ಸಾ ಕ್ರಮವನ್ನು ಅನುಸರಿಸುತ್ತಿರುವ ಬಗ್ಗೆ ಮಾಹಿತಿ ಪಡೆಯಬೇಕು.ಸೋಂಕಿತ ರು ಯಾವ ಕಾರಣಕ್ಕೆ ಮೃತಪಟ್ಟರು ಎಂಬುದರ ಬಗ್ಗೆ ಡೆತ್ ಆಡಿಟ್ ಮಾಡವುದನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.
ಕೊರೊನಾ ಸೋಂಕು ತಗುಲಿದ ವ್ಯಕ್ತಿಗಳಿಗೆ ಹಾಗೂ ಕುಟುಂಬದವರಿಗೆ ಸಮಸ್ಯೆ ಉಂಟಾಗಬಾರದು ಎಂಬ ಸದು ದ್ದೇಶದಿಂದ ತಂಡ ರಚಿಸಲಾಗಿದೆ.ಆದ್ದರಿಂದ ತಂಡದ ಅಧಿಕಾರಿಗಳು ಆಸ್ಪತ್ರೆಯ ಸಿಬ್ಬಂದಿಯೊಡನೆ ಪರಸ್ಪರ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರ್‌ನಾಥ್,ನೊಡೆಲ್ ಅಧಿಕಾರಿಗಳಾದ ಡಾ.ರವಿ,ಡಾ.ಸೀತಾಲಕ್ಷ್ಮೀ,ಡಾ.ಜಗ ದೀಶ್, ರೂಪಶ್ರೀ, ಚೆಸ್ಕಾಂ ಎಂಜಿನಿಯರುಗಳು ಹಾಗೂ ಪೊಲೀಸ್ ಸಹಾಯಕ ವೃತ್ತ ನೀರೀಕ್ಷಕರು ಉಪಸ್ಥಿತ ರಿದ್ದರು.