Home Uncategorized ಗುಜರಾತಿನಲ್ಲಿ ಆರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿ ನಡುವೆ ಡೀಲ್ ? ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯ

ಗುಜರಾತಿನಲ್ಲಿ ಆರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿ ನಡುವೆ ಡೀಲ್ ? ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯ

16
0

ಗುಜರಾತಿನಲ್ಲಿ ಬಂಧನವಾಗಿರುವ ಸ್ಯಾಂಟ್ರೋ ರವಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ನಡುವೆ ಒಪ್ಪಂದ ನಡೆದಿರುವ ಸಾಧ್ಯತೆಯಿರುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರು: ಗುಜರಾತಿನಲ್ಲಿ ಬಂಧನವಾಗಿರುವ ಸ್ಯಾಂಟ್ರೋ ರವಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ನಡುವೆ ಒಪ್ಪಂದ ನಡೆದಿರುವ ಸಾಧ್ಯತೆಯಿರುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಸ್ಯಾಂಟ್ರೋ ರವಿ ಬಂಧನ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್,  ನಿನ್ನೆ ಆರಗ ಜ್ಞಾನೇಂದ್ರ ಹಾಗೂ ಸ್ಯಾಂಟ್ರೋ ರವಿ ಇಬ್ಬರೂ ಗುಜರಾತಿಗೆ ಹೋಗಿದ್ದು, ಅಲ್ಲಿ  ಅವರಿಬ್ಬರ ನಡುವೆ ಒಪ್ಪಂದ ನಡೆದಿರಬಹುದೇ? ತಮ್ಮ ವಿರುದ್ದದ ಸಾಕ್ಷ್ಯ ನಾಶಕ್ಕಾಗಿ ಸಚಿವ ಆರಗ ಜ್ಞಾನೇಂದ್ರ ಗುಜರಾತಿಗೆ ಹೋಗಿದ್ದರೆ? ಎಂಬ ಅನುಮಾನ ವ್ಯಕ್ತಪಡಿಸಿದೆ. 

ಇದನ್ನೂ ಓದಿ: ವೇಷ ಬದಲಾಯಿಸಿ ಗುಜರಾತಿನಲ್ಲಿ ತಲೆಮರೆಸಿಕೊಂಡಿದ್ದ ‘ಸ್ಯಾಂಟ್ರೋ ರವಿ’ ಸೇರಿ ನಾಲ್ವರ ಸೆರೆ: ಎಡಿಜಿಪಿ ಅಲೋಕ್ ಕುಮಾರ್

ಗುಜರಾತಿನಲ್ಲಿ ಸ್ಯಾಂಟ್ರೋ ರವಿ ಜೊತೆಗೆ ನಡೆದ ಡೀಲಿಂಗ್ ಏನು?ವರ್ಗಾವಣೆ ದಂಧೆಯ ಸಾಕ್ಷ್ಯಗಳನ್ನು ಮುಚ್ಚಿಡಲು ಒಪ್ಪಂದ ಮಾಡಿಕೊಂಡಿರಾ?ಆತನ ಬಳಿ ಇದ್ದ ಹಲವು ಸಚಿವರ ಸಿಡಿಗಳನ್ನ ವಶಪಡಿಸಿಕೊಳ್ಳಲು ಹೋಗಿದ್ರಾ? ಅಥವಾ ಹೈಕಮಾಂಡ್‌ಗೆ ಭೇಟಿ ಮಾಡಿಸಿ ಆತನಿಗೆ ಉನ್ನತ ಹುದ್ದೆ ಕೊಡಿಸಲು ಹೋಗಿದ್ರಾ? ಎಂದು ಸರಣಿ ಪ್ರಶ್ನೆ ಕೇಳಿದೆ.

@JnanendraAraga ಅವರೇ,

ಗುಜರಾತಿನಲ್ಲಿ ಸ್ಯಾಂಟ್ರೋ ರವಿ ನಿಮ್ಮ ಮದ್ಯೆ ನಡೆದ ಡೀಲಿಂಗ್ ಏನು?

ವರ್ಗಾವಣೆ ದಂಧೆಯ ಸಾಕ್ಷ್ಯಗಳನ್ನು ಮುಚ್ಚಿಡಲು ಒಪ್ಪಂದ ಮಾಡಿಕೊಂಡಿರಾ?

ಆತನ ಬಳಿ ಇದ್ದ ಹಲವು ಸಚಿವರ ಸಿಡಿಗಳನ್ನ ವಶಪಡಿಸಿಕೊಳ್ಳಲು ಹೋಗಿದ್ರಾ?

ಅಥವಾ ಹೈಕಮಾಂಡ್‌ಗೆ ಭೇಟಿ ಮಾಡಿಸಿ ಆತನಿಗೆ ಉನ್ನತ ಹುದ್ದೆ ಕೊಡಿಸಲು ಹೋಗಿದ್ರಾ?
— Karnataka Congress (@INCKarnataka) January 13, 2023

ಸ್ಯಾಂಟ್ರೋ ರವಿಯ ವಿರುದ್ಧ ವರ್ಗಾವಣೆ ದಂಧೆಯ ವಿಚಾರವಾಗಿ ಸರ್ಕಾರ ಇನ್ನೂ ಪ್ರಕರಣ ದಾಖಲಿಸಲಿಲ್ಲ. ಆತನ ಬಂಧನವಾಗಿದ್ದು ಪತ್ನಿಯ ದೂರಿನ ಆಧಾರದಲ್ಲಿ ಹೊರತು ಸರ್ಕಾರದ ದೂರಿನಲ್ಲಿ ಅಲ್ಲ. ಆತನ ಎಲ್ಲಾ ವ್ಯವಹಾರಗಳನ್ನು, ಸರ್ಕಾರ, ಸಚಿವರ ಸಹಭಾಗಿತ್ವವನ್ನು ಲೋಕಾಯುಕ್ತ ಅಥವಾ ನ್ಯಾಯಾಂಗ ತನಿಖೆಗೆ ವಹಿಸಿದಲ್ಲಿ ಮಾತ್ರ ಸತ್ಯ ಹೊರಬರಲು ಸಾಧ್ಯ ಎಂದು ಕಾಂಗ್ರೆಸ್ ಒತ್ತಾಯಿಸಿದೆ.

LEAVE A REPLY

Please enter your comment!
Please enter your name here