Home Uncategorized ಗುಡ್​ನ್ಯೂಸ್: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ಏರಿಕೆ

ಗುಡ್​ನ್ಯೂಸ್: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ಏರಿಕೆ

11
0
Advertisement
bengaluru

ಬೆಂಗಳೂರು: ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ(Midday Meal Scheme) ಮಕ್ಕಳಿಗೆ ‘ವಿಶೇಷ ಭೋಜನಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದೀಗ ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ(Hostel Students)  ಉತ್ತಮ ಗುಣಮಟ್ಟದ ಆಹಾರ ನೀಡಲು ಸರ್ಕಾರ ಮಾಸಿಕ ಭೋಜನ ವೆಚ್ಚವನ್ನು ಏರಿಕೆ ಮಾಡಿದೆ.

ಇದನ್ನೂ ಓದಿ: ಹಬ್ಬ-ಹರಿದಿನ, ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಾಸಿಕ ಭೋಜನ ವೆಚ್ಚವನ್ನು1600 ರೂ. ರಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ. ಎಸ್.ಸಿ/ಎಸ್.ಟಿ ನಿರುದ್ಯೋಗಿಗಳಿಗೆ ಇ-ಕಾಮರ್ಸ್ ಅಡಿ ಆಹಾರ ಮತ್ತು ಇತರೆ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸಲು ವಾಹನ ಸೌಲಭ್ಯ ಒದಗಿಸಲಾಗಿದ್ದು, ವಿದ್ಯುತ್/ಇತರೆ ದ್ವಿಚಕ್ರ ವಾಹನಗಳಿಗೆ ಗರಿಷ್ಟ 50,000 ರೂ. ಸಹಾಯಧನ ಮತ್ತು 20,000 ರೂ. ಸಾಲ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಹಿತಿ ನೀಡಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ರಂತೆ, ಒಟ್ಟು ಗುರಿ 22400 ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. 300 ಎಸ್.ಸಿ/ಎಸ್.ಟಿ ಮಹಿಳೆಯರಿಗೆ ಪ್ರತಿಷ್ಠಿತ ಐ.ಐ.ಎಂ. ಬೆಂಗಳೂರಿನಲ್ಲಿ ಉದ್ಯಮಶೀಲತಾ ತರಬೇತಿ ನೀಡಲಾಗಿದೆ. ಪ್ರಸ್ತುತ 3 ಬ್ಯಾಚ್‌ಗಳ ತರಬೇತಿಯು ಪ್ರಗತಿಯಲ್ಲಿದೆ ಎಂದು ತಿಳಿಸಿದರು.

bengaluru bengaluru

2022-23ನೇ ಸಾಲನಿಂದ ಪ.ಜಾತಿ/ಪ.ಪಂಗಡದ ಬಿ.ಪಿ.ಎಲ್ ಕುಟುಂಬಗಳಿಗೆ 75 ಯುನಿಟ್ ವರೆಗೆ ಉಚಿತ ವಿದ್ಯುತ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಕರ್ನಾಟಕದಲ್ಲಿ ಭೇಟಿ ನೀಡಿರುವ 10 ಪ್ರಮುಖ ಸ್ಥಳಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲು ಕ್ರಮ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿಯ 70 ಹಾಗೂ ಪರಿಶಿಷ್ಟ ಪಂಗಡದ 23 ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಅತೀ ಸೂಕ್ಷ್ಮ ಸಮುದಾಯದ ಜನರ ಅಭಿವೃದ್ಧಿಗಾಗಿ ರೂ.50 ಕೋಟಿ ಅನುದಾನ ನೀಡಲಾಗಿದೆ ಎಂದರು.

ಮೆಟ್ರಿಕ್ ಪೂರ್ವ (9 ಮತ್ತು 10 ನೇ ತರಗತಿ) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಶೇ.60 ಕೇಂದ್ರ ಸರ್ಕಾರದಿಂದ 40 ಪ್ರತಿಶತ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ನಿರ್ವಹಣೆಗೆ 523.00 ಕೋಟಿ ರೂ. ನಿಗದಿ ಮಾಡಲಾಗಿದ್ದು, ಇದುವರೆಗೆ ರೂ.322.00 ಕೋಟಿ ರೂ. ವೆಚ್ಚ ಮಾಡಲಾಗಿದೆ. ವಿದ್ಯಾರ್ಥಿನಿಲಯ/ವಸತಿಶಾಲೆಗಳ ಕಟ್ಟಡ ನಿರ್ಮಾಣಕ್ಕಾಗಿ 545.00 ಕೋಟಿ ರೂ. ನಿಗದಿಪಡಿಸಿದ್ದು, ಇದುವರೆಗೆ ರೂ.305.00 ಕೋಟಿಗಳನ್ನು ವೆಚ್ಚ ಮಾಡಲಾಗಿದೆ ಎಂದು ಲೆಕ್ಕ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ 92 ವಿದ್ಯಾರ್ಥಿಗಳಿಗೆ ಹಿಮಾಚಲ ಪ್ರದೇಶದಲ್ಲಿ Basic Mountaineering Course ಮತ್ತು Orientation Course ತರಬೇತಿ ನೀಡಲಾಗುತ್ತಿದೆ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ


bengaluru

LEAVE A REPLY

Please enter your comment!
Please enter your name here