Home Uncategorized ಗೃಹ ನಿರ್ವಹಣೆಗೆ ಮಹಿಳೆಯರಿಗೆ ಆರ್ಥಿಕ ನೆರವು: ಬಜೆಟ್ ನಲ್ಲಿ ಘೋಷಣೆ ಸಿಎಂ ಬಸವರಾಜ ಬೊಮ್ಮಾಯಿ

ಗೃಹ ನಿರ್ವಹಣೆಗೆ ಮಹಿಳೆಯರಿಗೆ ಆರ್ಥಿಕ ನೆರವು: ಬಜೆಟ್ ನಲ್ಲಿ ಘೋಷಣೆ ಸಿಎಂ ಬಸವರಾಜ ಬೊಮ್ಮಾಯಿ

16
0

ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು: ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದ್ದು,  ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ  ಕನಿಷ್ಠ ಮನೆ  ನಿರ್ವಹಣೆಗೆ ಅಗತ್ಯವಿರುವ  ಆರ್ಥಿಕ ನೆರವು ನೀಡಲಾಗುವ ಯೋಜನೆಯ ನ್ನು ಆಯವ್ಯಯದಲ್ಲಿ  ಘೊಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರತೀ ಕುಟುಂಬಕ್ಕೆ ಮನೆ ನಡೆಸಲು ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಲಾಗುವುದು. ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್  ಉಪಚಾರ, ಆರೋಗ್ಯ, ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಇದಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಮೊದಲು ಚಾಲನೆಗೊಳಿಸಿ ಅದನ್ನು ಅನುಷ್ಠಾನ ಗೊಳಿಸಿ, ಪ್ರತಿ ಮನೆಗೆ ಸ್ತ್ರೀಯರ ಹೆಸರಿನಲ್ಲಿ ಸಹಾಯ ನೀಡಲಾಗುವುದು ಎಂದರು. 

ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ
ಜನಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ   ಒತ್ತು ನೀಡುವ ಯೋಜನೆಗಳ ಚಿಂತನೆ ಮಾಡುತ್ತಿದ್ದೇವೆ. ದುಡಿಯುವ ವರ್ಗಕ್ಕೆ ಹೆಚ್ವಿನ ಅನುಕೂಲ ಮಾಡುವ ಚಿಂತನೆ ಮಾಡಲಾಗುತ್ತಿದೆ.  ರೈತರು, ಕಾರ್ಮಿಕರು, ಮಹಿಳೆಯರು ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಜನಾಂಗದವರ ಶ್ರೇಯೋಭಿವೃದ್ಧಿಗೆ ಕಾರ್ಯಕ್ರಮ ಗಳನ್ನು ರೂಪಿಸಲಾಗುತ್ತಿದೆ. ಯುವಕರಿಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕ್ಕೆ ಒಂದು ಲಕ್ಷ ನೀಡಿ, ಬ್ಯಾಂಕ್ ಜೋಡಿಸಿ ಅವರನ್ನು ಸ್ವಾವಲಂಬಿ ಮಾಡಲು ಎಂಡ್ ಟು ಎಂಡ್ ಅಪ್ರೋಚ್ ವುಳ್ಳ ಕಾರ್ಯಕ್ರಮ ಇದಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ.  ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ  5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ  ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಬಜೆಟ್ ಗೆ ಪೂರ್ವಭಾವಿ ಸಿದ್ಧತೆ

ಸಚಿವ ಸಂಪುಟದಲ್ಲಿ ವಿಧಾನಸಭೆಯ  ಜಂಟಿ ಅಧಿವೇಶನ ಕ್ಕೆ ದಿನಾಂಕ ಗೊತ್ತು ಮಾಡಲಾಗುವುದು. ಬಜೆಟ್ ಅಧಿವೇಶನವನ್ನು ಫೆ. 17 ನೇ ತಾರೀಖು ಮಾಡುವ ಸಾಧ್ಯತೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲಾ ಸಿದ್ಧತೆಗಳನ್ನು ಪ್ರಾರಂಭ ಮಾಡಿದ್ದೇವೆ.   ಈಗಾಗಲೇ ಡಿಸೆಂಬರ್ ವರೆಗೆ  ನಮ್ಮ  ರಾಜ್ಯದ  ಆದಾಯವು  ಮೂರುಪಟ್ಟು ಹೆಚ್ಚಾ ಗಿದೆ. ಇದನ್ನು ಇನ್ನಷ್ಟು ಹೆಚ್ಚು ಮಾಡಲು ಗುರಿಗಳನ್ನು ಹೆಚ್ಚು ಮಾಡಲು ಸೂಚನೆ ನೀಡಲಾಗಿದೆ. ಜನಪರ ಆಯವ್ಯಯ ನೀಡಲು ತೀರ್ಮಾನ ಮಾಡಲಾಗಿದೆ. ಚುನಾವಣೆ ಇರುವುದರಿಂದ ವಿಶೇಷ ಬಜೆಟ್ ಇರಲಿದೆ. ಅಸ್ಸಾಂ ಹಾಗೂ , ಗುಜರಾತ್ ಸರ್ಕಾರ ಕೆಲವು ಘೋಷಣೆಗಳನ್ನು ಮಾಡಿವೆ. ಆದರೆ  ಘೋಷಣೆ ಬೇರೆ ಅನುಷ್ಠಾನ ಬೇರೆ ಎಂದರು. 

ದುಡಿಯುವ ವರ್ಗಕ್ಕೆ ಹೆಚ್ಚಿನ ಸಹಾಯ

ಪೌಷ್ಟಿಕ ಆಹಾರ ನೀಡಲು ದೊಡ್ಡ ಪ್ರಮಾಣದ ಘೋಷಣೆ ಮಾಡಲಾಗಿದೆ. ತೀವ್ರ, ಮಧ್ಯಮ ಎಂಬ ವರ್ಗೀಕರಣವಿದ್ದು, ತೀವ್ರ ಕೊರತೆಯಿರುವವರಿಗೆ ನೀಡುವ ಆಹಾರವನ್ನೇ ಮಧ್ಯಮ ಕೊರತೆ ಇರುವವರಿಗೆ ನೀಡುವುದು ಈಗಾಗಲೇ ಅನುಷ್ಠಾನಗೊಳ್ಳುತ್ತಿದೆ.  5- 6 ಜಿಲ್ಲೆಗಳಲ್ಲಿ ಐ.ಎಂ.ಆರ್ ಎಂಎಮರ್ ಕಡಿಮೆಯಿದ್ದು, ಅಡನ್ನು ಹೆಚ್ಚಿಗೆ ಮಾಡುವ ಸಲುವಾಗಿ ನಾವು ಚಿಂತನೆ ಮಾಡುತ್ತಿದ್ದೇವೆ. ಜನಸಾಮಾನ್ಯರ ಆರೋಗ್ಯ, ಶಿಕ್ಷಣ, ಉದ್ಯೋಗ ಆರ್ಥಿಕ ನೆರವು, ದುಡಿಯುವ ವರ್ಗಕ್ಕೆ ಹೆಚ್ಚಿನ ಸಹಾಯ ಯುವಕರಿಗೆ ಮತ್ತು ಸ್ತ್ರೀಯರಿಗೆ ಸಹಾಯ ಮಾಡಲಾಗುವುದು ಎಂದರು.

LEAVE A REPLY

Please enter your comment!
Please enter your name here