Home Uncategorized ಗೃಹ ಸಚಿವರ ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ; 6 ತಿಂಗಳಿನಿಂದ ಸಿಬ್ಬಂದಿಗಳಿಗೆ ವೇತನವಿಲ್ಲ!

ಗೃಹ ಸಚಿವರ ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ; 6 ತಿಂಗಳಿನಿಂದ ಸಿಬ್ಬಂದಿಗಳಿಗೆ ವೇತನವಿಲ್ಲ!

17
0

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ಬಂದಿತ್ತು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್​ ಆರಂಭಿಸಲು ಸೂಚಿಸಿದ್ದರು. ಜೊತೆಗೆ ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಮಹತ್ವ ಕೊಡಲಾಗುವುದು ಎಂದು ಹೇಳಿದ್ ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ಬಂದಿತ್ತು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್​ ಆರಂಭಿಸಲು ಸೂಚಿಸಿದ್ದರು. ಜೊತೆಗೆ ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಮಹತ್ವ ಕೊಡಲಾಗುವುದು ಎಂದು ಹೇಳಿದ್ದರು.

ಆದರೀಗ ಗೃಹ ಸಚಿವ ಡಾ.ಜಿ ಪರಮೇಶ್ವರ್ ​ಅವರ ಕ್ಷೇತ್ರ ಕೊರಟಗೆರೆಯಲ್ಲಿಯೇ ಇಂದಿರಾ ಕ್ಯಾಂಟೀನ್ ಮುಚ್ಚುವ ಹಂತಕ್ಕೆ ತಲುಪಿದೆ. ಹೌದು, ಕಳೆದ 6 ತಿಂಗಳಿನಿಂದ ವೇತನ ನೀಡದ ಹಿನ್ನೆಲೆಯಲ್ಲಿ ಇಲ್ಲಿನ ಸಿಬ್ಬಂದಿಗಳು ಇಂದಿರಾ ಕ್ಯಾಂಟೀನ್’ಗೆ ಬೀಗ ಜಡಿದಿದ್ದಾರೆ.

ಇಂದಿರಾ ಕ್ಯಾಂಟೀನ್ ಗಳ ಸೇವೆ ಸ್ಥಗಿತಗೊಂಡಿದ್ದರಿಂದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಅವರು, ನಿನ್ನೆ ಕ್ಯಾಂಟೀನ್‌ಗೆ ಭೇಟಿ ನೀಡಿ, ನಾಲ್ವರು ಸಿಬ್ಬಂದಿಗೆ ಮನವರಿಕೆ ಮಾಡಿ ಶುಕ್ರವಾರ ಕೆಲಸ ಮುಂದುವರಿಸುವಂತೆ ತಿಳಿಸಿದರು.

ನಿಖಿಲ್ ಎಂಬಾತನ ನೇತೃತ್ವದಲ್ಲಿ ಗುತ್ತಿಗೆ ಪಡೆದಿರುವ ಸಂಸ್ಥೆ ಸಿಬ್ಬಂದಿಗಳಿಗೆ ವೇತನ ನೀಡಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ವೇತನ ನೀಡದಿದ್ದರೆ ಪೊಲೀಸ್ ಠಾಣೆ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಅವರು ಮಾತನಾಡಿ, ಶುಕ್ರವಾರದಿಂದ ಕ್ಯಾಂಟೀನ್ ಗಳು ಪುನರಾರಂಭಗೊಂಡಿದೆ. ಪ್ರಸ್ತುತ ಎದುರಾಗಿರುವ ಸಮಸ್ಯೆಗಳ ಸಂಬಂಧ ಕ್ಯಾಂಟೀನ್‌ಗಳು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುವ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೂ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಕ್ಯಾಂಟೀನ್‌ನ ಕಾರ್ಯನಿರ್ವಹಣೆಯನ್ನು ನೋಡಿಕೊಳ್ಳಬೇಕಾದ ಪುರಸಭೆ ಮುಖ್ಯಾಧಿಕಾರಿ ಏಜೆನ್ಸಿಯವರು ಅದನ್ನು ನಿರ್ವಹಿಸುತ್ತಿಲ್ಲ. ಇದರಿಂದಾಗಿ ಕ್ಯಾಂಟೀನ್ ಕೆಲಕಾಲ ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here