Home Uncategorized ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

0
0
bengaluru

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ (State govt) ದಿಂದ ಆದೇಶ ಹೊರಡಿಸಿದೆ. ಗ್ರಾ.ಪಂ. ಅಧ್ಯಕ್ಷರ ಗೌರವಧನ 3 ಸಾವಿರದಿಂದ 6 ಸಾವಿರ, ಗ್ರಾ.ಪಂ. ಉಪಾಧ್ಯಕ್ಷರ ಗೌರವಧನ 2 ಸಾವಿರದಿಂದ 4 ಸಾವಿರ, ಗ್ರಾ.ಪಂ. ಸದಸ್ಯರ ಗೌರವಧನ 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ರಾಜ್​ ಇಲಾಖೆ ಆದೇಶಿಸಿದೆ. ಇತ್ತೀಚೆಗೆ ಕರ್ನಾಟಕ ಸರ್ಕಾರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ ನೀಡಿತ್ತು. ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಎರಡೂವರೆ ಸಾವಿರ ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.

ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಹಾಲಿ 7500 ರೂ. ಗೌರವ ಸಂಭಾವನೆ ನೀಡಲಾಗುತ್ತಿತ್ತು. ಈಗ 2500 ರೂ.ಗಳನ್ನು ಏರಿಕೆ ಮಾಡಲಾಗಿದೆ. ಹೀಗಾಗಿ ಒಟ್ಟು ಗೌರವ ಸಂಭಾವನೆ 10,000 ರೂ. ಆಗಲಿದೆ. ಇನ್ನು ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 8000 ರೂ. ಹಾಲಿ ಗೌರವ ಸಂಭಾವನೆ ಇತ್ತು. 2500 ರೂ. ಏರಿಕೆ ಮಾಡಲಾಗಿದೆ. ಪರಿಷ್ಕೃತ ಆದೇಶದ ಪ್ರಕಾರ 10,500 ರೂ. ಗೌರವ ಸಂಭಾವನೆ ದೊರೆಯಲಿದೆ.

ಇದನ್ನೂ ಓದಿ; ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ ಮಾಡಿ ಆದೇಶ; ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ

bengaluru

ನೇಕಾರರಿಗೆ (weavers) 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೆಲ ನಿರ್ಣಯ ಕೈಗೊಳ್ಳಲಾಗಿದೆ. ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ. ಪವರ್​​ ಲೂಮ್​ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವು ನೀಡಲಾಗುವುದು. ಮನೆಯಲ್ಲೇ ಕೆಲಸ ಮಾಡುವ ನೇಕಾರರು ಗುಡಿ ಕೈಗಾರಿಕೆ ವ್ಯಾಪ್ತಿಗೆ, ನೇಕಾರರು ಉತ್ಪಾದಿಸುವ ಬಟ್ಟೆಗಳ ಖರೀದಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಲ್ಲಿಂದಲೇ ಸಮವಸ್ತ್ರ ಖರೀದಿಸುವ ವ್ಯವಸ್ಥೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ. ಸಂಘಟಿತ ಕಾರ್ಮಿಕರ ನೆರವಿಗೆ ಸರ್ಕಾರದಿಂದ ನೆರವು. ಮುಂದಿನ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ನೇಕಾರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ: ನೇಕಾರ ಸಮ್ಮಾನ್ ಯೋಜನೆಗೆ ಡಿ. 16ರಂದು ಸಿಎಂ ಬೊಮ್ಮಾಯಿ ಚಾಲನೆ

ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವು

2021-22 ನೇ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ 49,544 ನೇಕಾರರಿಗೆ ರೂ.990.88 ಲಕ್ಷಗಳನ್ನು ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗಿತ್ತು. 2022-23 ನೇ ಸಾಲಿನ ಆಯವ್ಯಯದನ್ವಯ ನೋಂದಾಯಿತ ಕೈಮಗ್ಗ ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ರೂ.2,000/- ಗಳಿಂದ ರೂ.5,000/- ಗಳಿಗೆ ಹೆಚ್ಚಿಸಿದೆ. ಇಲ್ಲಿಯವರೆಗೆ 46,864 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

bengaluru

LEAVE A REPLY

Please enter your comment!
Please enter your name here