Home Uncategorized ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಮೃತ್ಯು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಮೃತ್ಯು

34
0

ಶಿರ್ವ, ಡಿ.9: ಚಲಿಸುತ್ತಿದ್ದ ರೈಲಿನಿಂದ ಬಿದ್ದು ವಲಸೆ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಡಿ.7ರಂದು ರಾತ್ರಿ ವೇಳೆ ಬೆಳಪು ಗ್ರಾಮದ ಪಣಿಯೂರು ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಪ್ರಭು ಸ್ವಾಮಿ ಕಟಾಪುರ ಮಠ(21) ಎಂದು ಗುರುತಿಸಲಾಗಿದೆ. ಇವರು ಕಳೆದು 6 ತಿಂಗಳಿನಿಂದ ಮಂಗಳೂರು ಸುರತ್ಕಲ್ ನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಸುರತ್ಕಲ್‌ನಿಂದ ಕಾರವಾರಕ್ಕೆ ಕೊಂಕಣ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇವರು, ಅಕಸ್ಮಿಕವಾಗಿ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here