Home Uncategorized ಚಾಮರಾಜನಗರ: ಸರ್ಕಾರಿ ಗೌರವಗಳೊಂದಿಗೆ ಧ್ರುವ ನಾರಾಯಣ ಅಂತ್ಯಕ್ರಿಯೆ

ಚಾಮರಾಜನಗರ: ಸರ್ಕಾರಿ ಗೌರವಗಳೊಂದಿಗೆ ಧ್ರುವ ನಾರಾಯಣ ಅಂತ್ಯಕ್ರಿಯೆ

5
0
bengaluru

ಹೃದಯಾಘಾತದಿಂದ ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು  ಹೆಗ್ಗವಾಡಿಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.  ಚಾಮರಾಜನಗರ: ಹೃದಯಾಘಾತದಿಂದ ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು  ಹೆಗ್ಗವಾಡಿಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. 

ಇದಕ್ಕೂ ಮುನ್ನ ಅಗಲಿದ ನಾಯಕನಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ರಾಷ್ಟ್ರಗೀತೆ ಮೊಳಗಿಸಿ, ಒಂದು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಮತ್ತಿತರ ಮುಖಂಡರು ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. 

ಇದನ್ನೂ ಓದಿ: ಹೃದಯಾಘಾತದಿಂದ ಆರ್.ಧ್ರುವನಾರಾಯಣ ನಿಧನ: ಕೆಪಿಸಿಸಿ ಕಾರ್ಯಾಧ್ಯಕ್ಷರ ಅಂತಿಮ ಕ್ಷಣಗಳು; ಕೆಲವೇ ಕೆಲವು ನಿಮಿಷಗಳಲ್ಲಿ ಎಲ್ಲವೂ ಮುಗಿದಿತ್ತು!

ಶನಿವಾರ ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಮೈಸೂರಿನ ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

bengaluru
bengaluru

LEAVE A REPLY

Please enter your comment!
Please enter your name here