Home Uncategorized ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ

22
0

ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿಯು ಇದೀಗ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಿದ್ಥತೆಗಳ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿಯು ಇದೀಗ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಿದ್ಥತೆಗಳ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮದ ಸಿದ್ಧತೆಗಾಗಿ ಜಿಲ್ಲಾಡಳಿತ ಆಡಳಿತಯ ಅಧಿಕಾರಿಗಳು ಪೊಲೀಸರು ಮತ್ತು ಇತರ ಸ್ಥಳೀಯ ಸಂಸ್ಥೆಗಳೊಂದಿಗೆ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಧ್ವಜಾರೋಹಣ ಕಾರ್ಯಕ್ರಮದ ಜೊತೆಗೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಈದ್ಗಾ ಮೈದಾನದಲ್ಲಿ ನಡೆಯಲಿವೆ. ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೈದಾನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲು ಸಿದ್ಧತೆಗಳ ನಡೆಸಲಾಗಿದೆ. ಬೆಂಗಳೂರು ಉತ್ತರ ಕಂದಾಯ ಸಹಾಯಕ ಆಯುಕ್ತರಿಗೆ ಇಲ್ಲಿನ ಗಣರಾಜ್ಯೋತ್ಸವದ ಜವಾಬ್ದಾರಿ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮೈದಾನದ ಭೂಮಿ ಮಾಲೀಕತ್ವದ ಕುರಿತು ಮುಸ್ಲಿಂ ಸೆಂಟ್ರಲ್ ಅಸೋಸಿಯೇಷನ್, ವಕ್ಫ್ ಬೋರ್ಡ್ ಪರವಾಗಿ ತೀವ್ರ ವಾಗ್ವಾದ ಎದುರಾಗಿದ್ದು, ಇದು ಸರ್ಕಾರಿ ಆಸ್ತಿ ಎಂದು ಕಂದಾಯ ಇಲಾಖೆ ಪ್ರತಿಪಾದಿಸುತ್ತಿದೆ.

ಸರ್ಕಾರದ ನಿಲುವನ್ನು ಬೆಂಬಲಿಸಿ ಹಿಂದೂ ಸಂಘಟನೆಗಳು ಕೂಡ ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜೋತ್ಸವ ಮತ್ತು ಗಣರಾಜ್ಯೋತ್ಸವ ಆಚರಣೆಗಳನ್ನು ಹೊರತುಪಡಿಸಿ ಇತರ ಧರ್ಮಗಳ ಹಬ್ಬಗಳನ್ನು ಆಯೋಜಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸುತ್ತಿವೆ.

ಹಿಂದೂ ಸಂಘಟನೆಗಳು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಯಾನಂದ ಅವರು, ಆಚರಣೆಯ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here