Home Uncategorized ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ

6
0
bengaluru

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮೆರೆದ ಸಮಯಪ್ರಜ್ಞೆಯಿಂದಾಗಿ ಸಂಭವೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮೆರೆದ ಸಮಯಪ್ರಜ್ಞೆಯಿಂದಾಗಿ ಸಂಭವೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಗುಜರಾತ್ ನಿಂದ ಬಂದಿದ್ದ ಪ್ರವಾಸಿ ಬಸ್ 50 ಮಂದಿಯನ್ನು ಹೊತ್ತು ಚಾಮುಂಡಿ ಬೆಟ್ಟಕ್ಕೆ ಸಾಗುತ್ತಿತ್ತು. ಈ ವೇಳೆ ಬಸ್‌ನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ.

ಚಾಮುಂಡಿಬೆಟ್ಟ ಬಸ್ ನಿಲ್ದಾಣದ ಸಮೀಪ ಸಾಗುತ್ತಿದ್ದಾಗ ಬಸ್‌ನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದಂತೆ ಹೊಗೆ ಬರಲು ಆರಂಭವಾಗಿಗಿದೆ. ಬಳಿಕ ಪೈಪ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿ್ದಾರೆ. ಕೂಡಲೇ ಬೆಂಕಿಯ ಸಂಪರ್ಕದ ವೈರ್ ಗಳನ್ನು ಕತ್ತರಿಸಿದ್ದಾರೆ.

ಒಂದೊಮ್ಮೆ ತಿಳಿಯದೆ ಬಸ್‌ ಮುಂದೆ ಸಾಗಿದ್ದರೆ, ಬೆಂಕಿಗೆ ಕನೆಕ್ಟ್‌ ಅದ ಪೈಪ್‌ಗಳನ್ನು ಕತ್ತರಿಸದೆ ಇದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಚಾಲಕನ ಸಮಯಪ್ರಜ್ಞೆಯಿಂದಾಗಿ 50 ಮಂದಿಯ ಜೀವ ಉಳಿದಂತಾಗಿದೆ.

bengaluru
bengaluru

LEAVE A REPLY

Please enter your comment!
Please enter your name here