Home Uncategorized ಚಿಕ್ಕಬಳ್ಳಾಪುರದಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆ ಸೇರಿ ಮೂವರ ದುರ್ಮರಣ

ಚಿಕ್ಕಬಳ್ಳಾಪುರದಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆ ಸೇರಿ ಮೂವರ ದುರ್ಮರಣ

14
0

ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಟೆಂಪೊ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.  ಚಿಕ್ಕಬಳ್ಳಾಪುರ: ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಟೆಂಪೊ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. 

ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದ್ದು ಘಟನೆಯಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಓರ್ವ ಮಹಿಳೆ ಹಾಗೂ ಬೈಕ್​ನಲ್ಲಿ ಇದ್ದ ಇಬ್ಬರು ಪುರುಷರು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. 

ಇದನ್ನೂ ಓದಿ: ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಜೈನ ಮುನಿಯ ಬರ್ಬರ ಹತ್ಯೆ!

ಅಪಘಾತದಲ್ಲಿ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ನಂತರ ಟೆಂಪೊಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here