Home Uncategorized ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ: ಸಿಎಂ ಬೊಮ್ಮಾಯಿ, ಚಿಕ್ಕಬಳ್ಳಾಪುರ ಉತ್ಸವಕ್ಕೆ...

ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ: ಸಿಎಂ ಬೊಮ್ಮಾಯಿ, ಚಿಕ್ಕಬಳ್ಳಾಪುರ ಉತ್ಸವಕ್ಕೆ ಚಾಲನೆ

5
0
bengaluru

ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬಯಲುಸೀಮೆ, ಐತಿಹಾಸಿಕ ತಾಣಗಳ ಕೇಂದ್ರವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಪ್ರಥಮ ಚಿಕ್ಕಬಳ್ಳಾಪುರ ಉತ್ಸವಕ್ಕೆ ನಿನ್ನೆ ಶನಿವಾರ ಅದ್ದೂರಿಯ ಚಾಲನೆ ದೊರೆಯಿತು.

ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಮೊದಲಾದವುಗಳನ್ನೊಳಗೊಂಡ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ನಿನ್ನೆ ಆರಂಭವಾಗಿ ಜನವರಿ 14 ವರೆಗೆ ಚಿಕ್ಕಬಳ್ಳಾಪುರ ಉತ್ಸವ ನಡೆಯಲಿದೆ. 
ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಖ್ಯಾತ ಎಂಜಿನಿಯರ್‌ ಸರ್‌.ಎಂ.ವಿಶ್ವೇಶ್ವರಯ್ಯ, ವಿಜ್ಞಾನದಲ್ಲಿ ಸಾಧನೆ ಮಾಡಿದ ಸಿಎನ್‌ಆರ್‌ ರಾವ್‌ ಇಲ್ಲಿಯವರೇ ಆಗಿದ್ದಾರೆ. ಹೀಗೆ ಇಬ್ಬರು ಭಾರತರತ್ನಗಳನ್ನು ಈ ಜಿಲ್ಲೆ ನೀಡಿದೆ. ಇತಿಹಾಸ ಪ್ರಸಿದ್ಧ ಭೋಗನಂದೀಶ್ವರ ದೇವಸ್ಥಾನ ಇಲ್ಲೇ ಇದೆ. ಇಂತಹ ವಿಶಿಷ್ಟ ಜಿಲ್ಲೆಯನ್ನು ಈಗ ಫಲ ಪುಷ್ಪ ಗಿರಿಧಾಮ ನಾಡು ಎಂದು ಕರೆಯಲಾಗಿದೆ. ಈ ಹೆಸರನ್ನು ಪ್ರವಾಸೋದ್ಯಮ ಇಲಾಖೆಯಿಂದ ಅಧಿಕೃತಗೊಳಿಸಲಾಗುವುದು ಎಂದು ತಿಳಿಸಿದರು.

ಡಾ.ಕೆ.ಸುಧಾಕರ್‌ ಅವರು ಆರೋಗ್ಯ ಸಚಿವರಾಗಿ ಕೋವಿಡ್‌ ನಿರ್ವಹಣೆಯನ್ನು ದೇಶಕ್ಕೇ ಮಾದರಿ ಎಂಬಂತೆ ಮಾಡಿದ್ದಾರೆ. ಇದರ ಸಂಪೂರ್ಣ ಶ್ರೇಯಸ್ಸು ಸಚಿವರಿಗೆ, ಆರೋಗ್ಯ ಸಿಬ್ಬಂದಿಗೆ ಸಲ್ಲಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಭಗವಂತ ಆಶೀರ್ವಾದ ಮಾಡುತ್ತಾನೆ. ಅದರಂತೆ ಸುಧಾಕರ್‌ ಅವರು ರಾಜ್ಯದ ಸೇವೆ ಮಾಡಿದ ಬಳಿಕ ಬರಡು ಭೂಮಿಯಾಗಿದ್ದ ಚಿಕ್ಕಬಳ್ಳಾಪುರದಲ್ಲಿ ಉತ್ತಮ ಮಳೆಯಾಗಿದೆ. ಇಲ್ಲಿ ಬೆಳೆಯುವ ತರಕಾರಿ, ರೇಷ್ಮೆ, ಹಾಲು ಉತ್ಕೃಷ್ಟವಾಗಿದೆ. ನಮ್ಮ ಮನೆಯಲ್ಲೂ ಚಿಕ್ಕಬಳ್ಳಾಪುರದ ತರಕಾರಿ ಬಳಸುತ್ತೇವೆ ಎಂದರು.

bengaluru

ಭಗೀರಥ ಬೊಮ್ಮಾಯಿ
ಸಚಿವ ಡಾ ಕೆ ಸುಧಾಕರ್ ಮಾತನಾಡಿ, ನೀರಾವರಿ ಸಚಿವರಾಗಿದ್ದಾಗ ಎತ್ತಿನಹೊಳೆ ಯೋಜನೆ ರೂಪಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಜಿಲ್ಲೆಯ ನಿಜವಾದ ಭಗೀರಥ. ಅಷ್ಟೇ ಅಲ್ಲ ಈ ಯೋಜನೆಯ ಮೂಲ ವೆಚ್ಚವನ್ನು 13,000 ಕೋಟಿ ರೂಪಾಯಿಗಳಿಂದ 23,000 ಕೋಟಿ ರೂಪಾಯಿಗೆ ಏರಿಸಿ ಜಿಲ್ಲೆಗೆ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ. ದಿ.ಶಂಕರ್‌ನಾಗ್‌ ಅವರ ಕನಸಾಗಿದ್ದ ನಂದಿಬೆಟ್ಟದ ರೋಪ್‌ ವೇ 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಈ ಎಲ್ಲವನ್ನೂ ಮುಂದಿನ 7 ದಿನಗಳಲ್ಲಿ ಹಬ್ಬವನ್ನಾಗಿ ಆಚರಿಸಿಕೊಂಡು, ಬೆಂಗಳೂರಿಗೆ ಸಹಕಾರವಾಗಿ ಚಿಕ್ಕಬಳ್ಳಾಪುರವನ್ನು ಬೆಳೆಸಲು ಪ್ರಯತ್ನ ಪಡುವುದಾಗಿ ಅವರು ಹೇಳಿದರು.

ಅದ್ಧೂರಿ ಮೆರವಣಿಗೆ
ವೇದಿಕೆ ಕಾರ್ಯಕ್ರಮ ಆರಂಭಕ್ಕೆ ಮುನ್ನ ಚಿಕ್ಕಬಳ್ಳಾಪುರ ನಗರದಲ್ಲಿ ಬೆಳಗ್ಗೆ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊಂಡಂತೆ ವಿಜೃಂಭಣೆಯ ಮೆರವಣಿಗೆ ನಡೆಯಿತು. ಚಿಕ್ಕಬಳ್ಳಾಪುರದ ಇತಿಹಾಸ, ಕಲಾ ಶ್ರೀಮಂತಿಕೆಯನ್ನು ಪ್ರದರ್ಶನ ಮಾಡುವ ಮೆರವಣಿಗೆ ಜನಮನಸೂರೆಗೊಂಡಿತು.

ಫಲ ಪುಷ್ಪ ಗಿರಿಧಾಮ ನಾಡು
ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಎಂಬ ಹೆಸರನ್ನು ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಈ ಹೆಸರನ್ನು ಅನಾವರಣ ಮಾಡಲಾಯಿತು.

ಕಿಚ್ಚ ಸುದೀಪ್‌ ಮೆರುಗು
ಕಾರ್ಯಕ್ರಮಕ್ಕೆ ಬಂದ ಜನಪ್ರಿಯ ಚಿತ್ರ ನಟ ಸುದೀಪ್‌ ಅವರು ಹೆಚ್ಚು ಮೆರುಗು ತಂದರು. ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ರಾಜ್ಯಸಭಾ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗೆಡೆ, ಸಚಿವರಾದ ವಿ.ಸುನಿಲ್‌ಕುಮಾರ್‌, ಭೈರತಿ ಬಸವರಾಜು, ಎಂಟಿಬಿ ನಾಗರಾಜ್‌, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

7 ದಿನಗಳ ಉತ್ಸವದಲ್ಲಿ ಕನ್ನಡದ ಖ್ಯಾತ ನಟ-ನಟಿಯರು ಭಾಗವಹಿಸಿ ವಿಶೇಷ ಮೆರುಗನ್ನು ತರಲಿದ್ದಾರೆ.

‘ಚಿಕ್ಕಬಳ್ಳಾಪುರ ಉತ್ಸವ- 2023’ರ ನೇರ ಪ್ರಸಾರ. ಈ ಐತಿಹಾಸಿಕ, ವರ್ಣರಂಜಿತ ಉತ್ಸವವನ್ನು ಕಣ್ತುಂಬಿಕೊಳ್ಳಿ.
#ChikkaballapuraUtsava#CKBUtsava https://t.co/YOcEvARKED
— Dr Sudhakar K (@mla_sudhakar) January 7, 2023

bengaluru

LEAVE A REPLY

Please enter your comment!
Please enter your name here