Home Uncategorized ಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧ; ಇಬ್ಬರು ಪುತ್ರಿಯರಿಗೆ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ತಂದೆ

ಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧ; ಇಬ್ಬರು ಪುತ್ರಿಯರಿಗೆ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ತಂದೆ

14
0
bengaluru

ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು 37 ವರ್ಷದ ನೇತ್ರಾವತಿ, ಮಕ್ಕಳಾದ 12 ವರ್ಷದ ವರ್ಷಿತಾ ಮತ್ತು 9 ವರ್ಷದ ಸ್ನೇಹಾ ಎಂದು ಗುರುತಿಸಲಾಗಿದೆ. ಇನ್ನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ 48 ವರ್ಷದ ಸೊನ್ನೇಗೌಡ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮೈಸೂರು: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್ ಆತ್ಮಹತ್ಯೆಗೆ ಶರಣು 

ಸೊನ್ನೇಗೌಡನ ಮನೆಯಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದಾರೆ. ವಿಷ ಸೇವಿಸಿ ಅಶ್ವಸ್ಥನಾಗಿದ್ದ ಸೊನ್ನೇಗೌಡನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. 

bengaluru

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್ ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.

bengaluru

LEAVE A REPLY

Please enter your comment!
Please enter your name here