Home Uncategorized ಚಿಕ್ಕಮಗಳೂರು: ಕ್ರಿಶ್ಚಿಯನ್ನರೇ ಇಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಹಿಂದೂಪರ ಸಂಘಟನೆ, ಗ್ರಾಮಸ್ಥರ ವಿರೋಧ

ಚಿಕ್ಕಮಗಳೂರು: ಕ್ರಿಶ್ಚಿಯನ್ನರೇ ಇಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಹಿಂದೂಪರ ಸಂಘಟನೆ, ಗ್ರಾಮಸ್ಥರ ವಿರೋಧ

9
0

ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಚರ್ಚ್ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಒಂದೂ ಕ್ರಿಶ್ಚಿಯನ್ ಕುಟುಂಬವಿಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಮಾಡುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು, ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.  ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಚರ್ಚ್ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಒಂದೂ ಕ್ರಿಶ್ಚಿಯನ್ ಕುಟುಂಬವಿಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಮಾಡುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು, ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣವಾಗುತ್ತಿದ್ದು, ಈ ಬೆಳವಣಿಗೆ ಈಗಾಗಲೇ ವಿವಾದಕ್ಕೆ ಕಾರಣವಾಗಿದೆ. ಚರ್ಚ್ ಕಟ್ಟಡ ನಿರ್ಮಾಣ ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಗ್ರಾಮದಲ್ಲಿ ಒಂದೇ ಒಂದು ಕ್ರಿಶ್ಚಿಯನ್ ಕುಟುಂಬಗಳಿಲ್ಲದ ಕಾರಣ ಚರ್ಚ್ ನಿರ್ಮಾಣ ಮಾಡಬಾರದು ಎಂದು ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಧಾರ್ಮಿಕ ಮತಾಂತರಕ್ಕೆ ಈ ಚರ್ಚ್ ನಿರ್ಮಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೂಡಿಗೆರೆ ಸಮೀಪದ ಹಾಂಡಿ ಗ್ರಾಮದ ರಂಗ ಎಂಬುವವರಿಗೆ ಮನೆ ನಿರ್ಮಿಸಿಕೊಳ್ಳಲು ನೀಡಿದ ನಿವೇಶನದಲ್ಲಿ ಚರ್ಚ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಘಟನೆ ಕುರಿತು ಪೊಲೀಸರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಬಿಜೆಪಿ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಕೋಮು ಸೂಕ್ಷ್ಮ ಪ್ರದೇಶವಾದ ಚಿಕ್ಕಮಗಳೂರಿನಲ್ಲಿ ಈ ಬೆಳವಣಿಗೆ ಆತಂಕ ಮೂಡಿಸಿದೆ. ಆದರೆ, ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನುಭವಿಸಿತ್ತು.

ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ತಮ್ಮ ಬಲಗೈ ಬಂಟನ ಎದುರು ಸೋಲು ಕಂಡಿದ್ದರು.

LEAVE A REPLY

Please enter your comment!
Please enter your name here