ಆಘಾತಕಾರಿ ಘಟನೆಯೊಂದರಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಕಂಡ್ಯದಲ್ಲಿ ಸೋಮವಾರ ಇಬ್ಬರು ವ್ಯಕ್ತಿಗಳು ಗುಂಡು ತಗುಲಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಕಂಡ್ಯದಲ್ಲಿ ಸೋಮವಾರ ಇಬ್ಬರು ವ್ಯಕ್ತಿಗಳು ಗುಂಡು ತಗುಲಿ ಸಾವಿಗೀಡಾಗಿದ್ದಾರೆ.
ಮೃತರನ್ನು 28 ವರ್ಷದ ಪ್ರಕಾಶ್ ಮತ್ತು 30 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಸಂತ್ರಸ್ತರು ಬೈಕ್‌ನಲ್ಲಿ ಹೋಗುತ್ತಿದ್ದಾಗ ದೇಶೀ ನಿರ್ಮಿತ ರೈಫಲ್‌ನಿಂದ ಆರೋಪಿ ಗುಂಡು ಹಾರಿಸಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿ ರಮೇಶ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಡಬಲ್ ಮರ್ಡರ್ ಪ್ರಕರಣ: ಕಾಲಿಗೆ ಗುಂಡು ಹಾರಿಸಿ ಇಬ್ಬರು ಆರೋಪಿಗಳ ಸೆರೆ
ರಮೇಶ್ ಕಂಡ್ಯ ನಿವಾಸಿಯಾಗಿದ್ದು, ಮೃತರು ಪಕ್ಕದ ಬಿದರೆ ಗ್ರಾಮದವರು. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.