Home Uncategorized ಚಿಕ್ಕಮಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಾಯ

ಚಿಕ್ಕಮಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಾಯ

50
0

ಬುಧವಾರ ಚಿಕ್ಕಮಗಳೂರು ನಗರದ ಹೊರವಲಯದ ಕಾನ್ಯೆ ಕ್ರಾಸ್ ಬಳಿ ತಾವು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು: ಬುಧವಾರ ನಗರದ ಹೊರವಲಯದ ಕಾನ್ಯೆ ಕ್ರಾಸ್ ಬಳಿ ತಾವು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ವಿಜಯಪುರ ಲೇಔಟ್ ನಿವಾಸಿಗಳಾದ ನಿರಂಜನ್ (42) ಮತ್ತು ಚೆನ್ನಮ್ಮ (67) ಎಂದು ಗುರುತಿಸಲಾಗಿದೆ. ಮತ್ತೋರ್ವ ಮಹಿಳೆ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಮಗಳೂರು ಕಡೆಯಿಂದ ಕಡೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ; ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ!

ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here