Home Uncategorized ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಯುವತಿ ಸಾವು: ಸ್ಥಳೀಯರ ಪ್ರತಿಭಟನೆ, ಹಲವರು ಅಸ್ವಸ್ಥ

ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಯುವತಿ ಸಾವು: ಸ್ಥಳೀಯರ ಪ್ರತಿಭಟನೆ, ಹಲವರು ಅಸ್ವಸ್ಥ

24
0

ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಯುವತಿ ನಿನ್ನೆ ಮೃತಪಟ್ಟು ಅಸ್ವಸ್ಥಕ್ಕೀಡಾಗಿರುವವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ.  ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಯುವತಿ ನಿನ್ನೆ ಮೃತಪಟ್ಟು ಹಲವರು ಅಸ್ವಸ್ಥಕ್ಕೀಡಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ. 

ಮೃತ ಯುವತಿಯನ್ನು 21 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಅಸ್ವಸ್ಥಕ್ಕೀಡಾಗಿರುವವರನ್ನು ಬಸವೇಶ್ವರ ಖಾಸಗಿ ಮತ್ತು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಯುವತಿ ಮಂಜುಳಾ ಮೃತದೇಹವನ್ನು ಜಿಲ್ಲಾಧಿಕಾರಿಗಳು ಬರುವವರೆಗೆ ತೆರವುಗೊಳಿಸುವುದಿಲ್ಲ ಎಂದು ಕವಾಡಿಗರಹಟ್ಟಿ ಜನರು ಪಟ್ಟು ಹಿಡಿದು ಕುಳಿತಿದ್ದು, ನಗರಸಭೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೃತ ಯುವತಿಯ ಶವವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶವಾಗಾರದಲ್ಲಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿ ಬಡಾವಣೆಗೆ ನಗರಸಭೆಯಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಈ ನೀರು ಸೇವಿಸಿ ಜನರು ಏಕಾಏಕಿ ಅಸ್ವಸ್ಥಗೊಂಡಿದ್ದಾರೆ.

LEAVE A REPLY

Please enter your comment!
Please enter your name here