Home Uncategorized ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ; ಹೆಚ್ಚಿದ ಆತಂಕ

ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ; ಹೆಚ್ಚಿದ ಆತಂಕ

22
0
Advertisement
bengaluru

ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಈ ಬೆಳವಣಿಗೆ ನಡುವಲ್ಲೇ ಚೀನಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಬೆಂಗಳೂರು: ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಈ ಬೆಳವಣಿಗೆ ನಡುವಲ್ಲೇ ಚೀನಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ನಿನ್ನೆ ಚೀನಾದಿಂದ ಬೆಂಗಳೂರಿಗೆ ಬಂದಿದ್ದ 35 ವರ್ಷದ ವ್ಯಕ್ತಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಪರೀಕ್ಷೆ ವೇಳೆ ಕೊರೋನಾ‌ ಪಾಸಿಟಿವ್ ಇರುವುದು ಕಂಡು ಬಂದಿದೆ.

ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಷನ್​ಗೆ ಒಳಪಡಿಸಲಾಗಿದೆ.

ಇದೀಗ ವ್ಯಕ್ತಿಯಲ್ಲಿ ಪತ್ತೆಯಾಗಿರುವುದು ಕೊರೋನಾ ರೂಪಾಂತರಿ ಬಿಎಫ್7 ಅಥವಾ ಕೇವಲ ಕೋವಿಡ್ ಸೋಂಕೇ ಎಂಬುದನ್ನು ತಿಳಿದುಕೊಳ್ಳಲು ಸೋಂಕಿತ ವ್ಯಕ್ತಿಯ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್’ಗೆ ರವಾನಿಸಲಾಗಿದೆ.

bengaluru bengaluru

ಕಳೆದ ಮೂರು ದಿನಗಳಲ್ಲಿ ವಿದೇಶಗಳಿಂದ ಬಂದ 9 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 9 ಮಂದಿಯಲ್ಲಿ ಐವರನ್ನು ಹೋಂ ಕ್ವಾರಂಟೀನ್​ಗೆ ಒಳಪಡಿಸಲಾಗಿದೆ. ಉಳಿದಂತೆ ನಾಲ್ವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


bengaluru

LEAVE A REPLY

Please enter your comment!
Please enter your name here