Home Uncategorized 'ಜಡೆ ಜಗಳ': ರೋಹಿಣಿ ಸಿಂಧೂರಿ ವಿರುದ್ಧ ಸಿ.ಎಸ್ ಗೆ ದಿನೇಶ್​ ಕಲ್ಲಹಳ್ಳಿ ದೂರು; ನಿಮ್ಮ ಗಲಾಟೆಯಲ್ಲಿ...

'ಜಡೆ ಜಗಳ': ರೋಹಿಣಿ ಸಿಂಧೂರಿ ವಿರುದ್ಧ ಸಿ.ಎಸ್ ಗೆ ದಿನೇಶ್​ ಕಲ್ಲಹಳ್ಳಿ ದೂರು; ನಿಮ್ಮ ಗಲಾಟೆಯಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ- ಡಿ.ಕೆ.ರವಿ ತಾಯಿ

22
0

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ. ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ.

ಮಧ್ಯಾಹ್ನ ನಂತರ ಅವರು ಲೋಕಾಯುಕ್ತರಿಗೂ ದೂರು ನೀಡಲಿದ್ದಾರೆ. ರೋಹಿಣಿ ಸಿಂಧೂರಿ ವಿರುದ್ಧ ಹಿರಿಯ ಐಪಿಎಸ್​ ಅಧಿಕಾರಿಯಾದ ಡಿ.ರೂಪ ಮೌದ್ಗೀಲ್‌ ಅವರು ತಮ್ಮ ಅಧಿಕೃತ ಫೇಸ್​ಬುಕ್ ಖಾತೆಯಲ್ಲಿ ಬರೆದಿರುವ ಆರೋಪಗಳ ಬಗ್ಗೆ ಅಖಿಲ ಭಾರತ ಸೇವಾ (ನಡತೆ) ನಿಯಮಗಳು, 1962 ರ ನಿಯಮದ ಅಡಿಯಲ್ಲಿ ತನಿಖೆ ನಡೆಸುವಂತೆ ಮನವಿ ಸಲ್ಲಿಸುತ್ತಿದ್ದೇನೆ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ದಿನೇಶ್​ ಕಲ್ಲಹಳ್ಳಿ ಉಲ್ಲೇಖಿಸಿದ್ದಾರೆ.

ರೋಹಿಣಿ ವಿರುದ್ಧ ರೂಪ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರಗೆಳೆದು ಸಾರ್ವಜನಿಕರಿಗೆ ಅಧಿಕಾರಿಗಳ ಬಗ್ಗೆ ಇರುವ ನಂಬಿಕೆ-ಅಪನಂಬಿಕೆಗಳಿಗೆ ತೆರೆ ಎಳೆದು ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಶಿಸ್ತು ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಇಬ್ಬರು ಮಹಿಳಾ ಅಧಿಕಾರಿಗಳ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಇವರ ಇಬ್ಬರ ಜಗಳದಲ್ಲಿ ದಿವಂಗತ ಐಎಎಸ್​​ ಅಧಿಕಾರಿ ಡಿ.ಕೆ ರವಿ ಅವರ ಹೆಸರು ಎಳೆದು ತಂದಿದ್ದು, ಈ ವಿಚಾರವಾಗಿ ಡಿ.ಕೆ.ರವಿ ತಾಯಿ ಗೌರಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಖಾಸಗಿ ಚಾನೆಲ್ ಜೊತೆ ಮಾತನಾಡಿರುವ ಗೌರಮ್ಮ, ನಿಮ್ಮ ಗಲಾಟೆ ವಿಚಾರದಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ ಎಂದು ಹೇಳಿದ್ದಾರೆ. ನನ್ನ ಮಗ ಹೋಗಿ 8 ವರ್ಷವಾಯ್ತು. ಡಿ.ಕೆ.ರವಿಯನ್ನು ನಾನು ಸಾಕಿ ಬೆಳೆಸಿದ್ದೇನೆ. ರವಿ ಜತೆ ಕುಸುಮಾ 5 ವರ್ಷ ಅಷ್ಟೆ ಸಂಸಾರ ಮಾಡಿದ್ದಾಳೆ. ನನ್ನ ಮಗ ಇರುವವರೆಗೂ ಮಾತ್ರ ಆಕೆ ಸೊಸೆ. ಹೀಗಾಗಿ ನೀವ್ಯಾರೂ ನನ್ನ ಮಗನ ಹೆಸರನ್ನು ತರಬೇಡಿ ಎಂದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here