Home Uncategorized ಜನಪರ ಬಜೆಟ್ ಮಂಡಿಸುವ ಮೂಲಕ ಈ ಬಾರಿ ದುಡಿಯುವ ವರ್ಗದ ಆರ್ಥಿಕತೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ;...

ಜನಪರ ಬಜೆಟ್ ಮಂಡಿಸುವ ಮೂಲಕ ಈ ಬಾರಿ ದುಡಿಯುವ ವರ್ಗದ ಆರ್ಥಿಕತೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ; ಸಿಎಂ ಬೊಮ್ಮಾಯಿ

11
0
bengaluru

ಈ ಬಾರಿ ಜನರಪರವಾದ ಬಜೆಟ್ ಮಂಡನೆಯಾಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ಬೆಂಗಳೂರು: ಈ ಬಾರಿ ಜನರಪರವಾದ ಬಜೆಟ್ ಮಂಡನೆಯಾಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ಸ್ಮರಣಾರ್ಥವಾಗಿ ಸಿಎಂ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಇಂದು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಎರಡು ನಿಮಿಷಗಳ ಮೌನಾಚರಣೆಯಲ್ಲಿ ಭಾಗಿಯಾದೆನು. pic.twitter.com/2RsQ0RtOgF
— Basavaraj S Bommai (@BSBommai) January 30, 2023

ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಸ್ಮರಣೆ ಮಾಡಿಕೊಂಡು ಮೌನಚಾರಣೆ ಮಾಡಿದ್ದೇವೆ. ಗಾಂಧೀಜಿಯವರ ಜೀವನವೇ ಒಂದು ಸಂದೇಶದಂತಿದ್ದು, ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನೇ ಪ್ರತಿಪಾದಿಸಿದವರು. ಅಹಿಂಸೆಯಲ್ಲಿ ದೇಶಕ್ಕೆ ಸ್ವಾತಂತ್ರ ಕೊಡಿಸಿದವರು. ಗಾಂಧೀಜಿ ತತ್ವ ಆದರ್ಶ ಮೇಲೆ ಸಾರ್ವಜನಿಕ ಜೀವನದಲ್ಲಿ ನೈತಿಕತೆ ಬರಬೇಕು. ಸ್ವಾತಂತ್ರ್ಯಕ್ಕಾಗಿ ಸುಭಾಶ್ ಚಂದ್ರ ಬೋಸ್ ಸೇರಿದಂತೆ ಅನೇಕ ಮಹನೀಯರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿದರು.

ಬಳಿಕ ರಾಜ್ಯ ಬಜೆಟ್ ಕುರಿತು ಮಾತನಾಡಿ, ಈ ಬಾರಿ ಜನರಪರವಾದ ಬಜೆಟ್ ಮಂಡನೆಯಾಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರ ಎದುರಾಗುತ್ತಿದ್ದಂತೆ, ಸಂಪುಟ ವಿಸ್ತರಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯುತ್ತಲೇ ಇದೆ. ದೆಹಲಿಗೆ ಹೋಗಿ ಏನೂ ಹೇಳಬೇಕೋ ಅದನ್ನು ಹೇಳಿದ್ದೇವೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ ಸುಧಾಕರ್, ಸಿ.ಟಿ ರವಿ, ಸುರೇಶ್ ಕುಮಾರ್, ಕುಡುಚಿ ಶಾಸಕ ಪಿ. ರಾಜೀವ್, ಸಿದ್ದು ಸವದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here