Home Uncategorized ಜಪಾನ್'ನಿಂದ ಕೆಐಎಗೆ ಬಂದ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ದೃಢ

ಜಪಾನ್'ನಿಂದ ಕೆಐಎಗೆ ಬಂದ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ದೃಢ

15
0

ಜಪಾನ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ಕ್ಕೆ ಬಂದ 63 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದೆ. ಬೆಂಗಳೂರು: ಜಪಾನ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ಕ್ಕೆ ಬಂದ 63 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದೆ.

ಕೋವಿಡ್ -19 ಗೆ ಹೆಚ್ಚಿನ ಅಪಾಯವಿರುವ ಆರು ದೇಶಗಳಲ್ಲಿ ಜಪಾನ್ ಒಂದಾಗಿದೆ, ಚೀನಾ, ಹಾಂಗ್ ಕಾಂಗ್, ಸಿಂಗಾಪುರ್, ದಕ್ಷಿಣ ಕೊರಿಯಾ ಮತ್ತು ಥೈಲ್ಯಾಂಡ್ ಉಳಿದ ಐದು ಅಪಾಯಕಾರಿ ರಾಷ್ಟ್ರಗಳಾಗಿವೆ. ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹೈರಿಸ್ಕ್ ರಾಷ್ಟ್ರಗಳಿಂದ ಬಂದ ವಿದೇಶಿ ಪ್ರಜೆಗಳಿಗೆ ಆರ್’ಟಿ-ಪಿಸಿಆರ್ ಮತ್ತು ಹೋಮ್ ಐಸೋಲೇ||ನ್ ನ್ನು ಕಡ್ಡಾಯಗೊಳಿಸಿದೆ.

ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ಶೇ.2ರಷ್ಟು ಅಂತರರಾಷ್ಟ್ರೀಯ ಪ್ರಯಾಣಿಕರಲ್ಲಿ ಒಬ್ಬ ಪ್ರಯಾಣಿಕನಲ್ಲಿ ಸೋಂಕು ಪತ್ತೆಯಾಗುತ್ತಿದೆ.

ಮಂಗಳವಾರ ಕೆಐಎಯಲ್ಲಿ ಒಟ್ಟು 177 ಪ್ರಯಾಣಿಕರನ್ನು ಪರೀಕ್ಷಿಸಲಾಗಿದ್ದು, ಈ ವೇಳೆ ಓರ್ವ  ಒಬ್ಬ ಪ್ರಯಾಣಿಕರಿಗೆ ಮಾತ್ರ ಕೋವಿಡ್ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಮಂಗಳವಾರ ಒಟ್ಟು 26 ಅಂತಾರಾಷ್ಟ್ರೀಯ ವಿಮಾನಗಳು ಬಂದಿಳಿದಿದ್ದು, 5,419 ಪ್ರಯಾಣಿಕರು ನಗರಕ್ಕೆ ಆಗಮಿಸಿದ್ದಾರೆಂದು ತಿಳಿದುಬಂದಿದೆ.

ಆತಂಕಕ್ಕೆ ಕಾರಣವಾಗಬಹುದಾದ ಯಾವುದೇ ರೂಪಾಂತರ ಪತ್ತೆ ಮಾಡಲು ಪ್ರಯಾಣಿಕರ ಮಾದರಿಯನ್ನು ಜೀನೋಮಿಕ್ ಅನುಕ್ರಮ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸುತ್ತಿದೆ.

ಪರೀಕ್ಷೆಯ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಜರ್ಮನಿಯಿಂದ ಬಂದ ಪ್ರಯಾಣಿಕರೊಬ್ಬರಲ್ಲಿ BF.7 ರೂಪಾಂತರ ಪತ್ತೆಯಾಗಿರುವುದನ್ನು ದೃಢಪಡಿಸಿದೆ.

ಏತನ್ಮಧ್ಯೆ, ಬೆಂಗಳೂರಿನ ಕೋವಿಡ್’ಗೆ ಗೊತ್ತುಪಡಿಸಿದ ಆಸ್ಪತ್ರೆ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಬುಧವಾರ ಮೂರು ಮಂದಿ ಕೋವಿಡ್ ವಾರ್ಡ್‌ಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಯಾವುದೇ ವಿಮಾನ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿಲ್ಲ. ಪ್ರಸ್ತುತ ದಾಖಲಾಗಿರುವ ಮೂವರು ರೋಗಿಗಳು ಸ್ಥಳೀಯರು ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆಂದು ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕೆಂಪರಾಜ್ ಟಿ ಅವರು ತಿಳಿಸಿದ್ದಾರೆ.

ಮೂವರು ರೋಗಿಗಳಲ್ಲಿ ಒಬ್ಬರು ತೀವ್ರವಾದ ಉಸಿರಾಟದ ಸೋಂಕಿನ (SARI) ರೋಗಲಕ್ಷಣಗಳಿಂದ ಬಳಲುತ್ತಿದ್ದರು. ಅವರನ್ನು ICU ಗೆ ದಾಖಲಿಸಲಾಗಿದೆ. ಉಳಿದ ಇಬ್ಬರಿಗೆ ಜ್ವರ ಮತ್ತು ಶೀತದ ಸೌಮ್ಯ ಲಕ್ಷಣಗಳು ಕಂಡುಬಂದಿದ್ದು, ಅವರಿಗೆ ವಾರ್ಡ್‌ನಲ್ಲಿ ಚಿಕಿತ್ಸ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here