Home Uncategorized ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಮಹಿಳಾ ಮತ್ತು ಮಕ್ಕಳ ಕಲ್ಯಾಣ...

ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

7
0
Advertisement
bengaluru

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.  ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಲಿಂಕ್ ಆದ ಖಾತೆಗೆ ಹಣ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿ ಅರ್ಜಿಗೆ ಹಣ ಪಡೆಯುವಂತಿಲ್ಲ; ಬಿಜೆಪಿ ಮೊದಲು ತನ್ನ ಎಲ್ಲ ಆಶ್ವಾಸನೆ ಈಡೇರಿಸಿದೆಯೇ ಎಂದು ಹೇಳಲಿ: ಡಿಕೆ ಶಿವಕುಮಾರ್

ಸೋಮವಾರ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು, ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ , ನಾಯಕರು ಒಪ್ಪಿಗೆ ಕೊಟ್ಟರೆ  ಆಗಸ್ಟ್ 17 ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಹೇಳಿದ್ದಾರೆ.

bengaluru bengaluru

ಗೃಹಲಕ್ಷ್ಮೀ ಯೋಜನೆಯನ್ನು ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲಾಗುವುದು. ರಾಷ್ಟ್ರೀಯ ನಾಯಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ನಾಯಕರು ಒಪ್ಪಿಕೊಂಡರೆ 17ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಉದ್ಘಾಟನೆ ಮಾಡಲಾಗುವುದು. ಸೋನಿಯಾ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ. ರಾಷ್ಟ್ರೀಯ ನಾಯಕರ ನಿರ್ಧಾರ ಇಂದು ಮಧ್ಯಾಹ್ನ ಖಚಿತವಾಗುತ್ತದೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸಮಯ ನೀಡಲಿಲ್ಲ ಅಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಾಗುವುದು ಎಂದರು.

ಇದನ್ನೂ ಓದಿ: ಸರ್ವರ್’ ಸಮಸ್ಯೆ ಸರಿಪಡಿಸಿ ಶೀಘ್ರದಲ್ಲೇ ‘ಗೃಹಲಕ್ಷ್ಮಿ’ ಯೋಜನೆಗೆ ನೋಂದಣಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕನಿಗದಿ ಮಾಡಿಲ್ಲ, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರು ಹಣ ಸಿಗಲಿದೆ.


bengaluru

LEAVE A REPLY

Please enter your comment!
Please enter your name here