Home Uncategorized ಜೇವರ್ಗಿ ಭೀಕರ ಅಪಘಾತ; ಲಾರಿ-ಟ್ರಾವೆಲರ್ ಡಿಕ್ಕಿ: ಚಾಲಕ ಸೇರಿ ಇಬ್ಬರ ಸಾವು

ಜೇವರ್ಗಿ ಭೀಕರ ಅಪಘಾತ; ಲಾರಿ-ಟ್ರಾವೆಲರ್ ಡಿಕ್ಕಿ: ಚಾಲಕ ಸೇರಿ ಇಬ್ಬರ ಸಾವು

1
0
bengaluru

ಲಾರಿ-ಟೆಂಪೋ ಟ್ರಾವೆಲರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜೇವರ್ಗಿ ಇಂದು ಮುಂಜಾನೆ ಸಂಭವಿಸಿದೆ. ಜೇವರ್ಗಿ: ಲಾರಿ-ಟೆಂಪೋ ಟ್ರಾವೆಲರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜೇವರ್ಗಿ ಇಂದು ಮುಂಜಾನೆ ಸಂಭವಿಸಿದೆ.

ಜೇವರ್ಗಿ ಹೊರವಲಯದ ಗೌನಳ್ಳಿ ಕ್ರಾಸ್ ಹತ್ತಿರ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ದುರಂತ ನಡೆದಿದ್ದು, ಲಾರಿ ಮತ್ತು ಟ್ರಾವೆಲರ್ ನಡುವೆ ಡಿಕ್ಕಿ ಸಂಭವಿಸಿ ಟ್ರಾವೆಲರ್ ಚಾಲಕ ಸೇರಿ ಇಬ್ಬರು ಮೃತಪಟ್ಟು, 14 ಜನರು ಗಾಯಗೊಂಡಿದ್ದಾರೆ. 

ಇದನ್ನೂ ಓದಿ: ಚನ್ನಪಟ್ಟಣ: ದಶಪಥ ಹೆದ್ದಾರಿಯಲ್ಲಿ ಅಪಘಾತ ಇಬ್ಬರ ಸಾವು; ತಿರುಪತಿಯಿಂದ ವಾಪಸಾಗುತ್ತಿದ್ದ ಟಿಟಿಗೆ ಕ್ಯಾಂಟರ್ ಡಿಕ್ಕಿ

ಮೃತರನ್ನು ಚಾಲಕ ಅಪ್ಪು ಕಲಬುರಗಿ(34) ಮತ್ತು ಹಾಗರಗುಂಡಗಿ ಗ್ರಾಮದ ಸಂಜೀವಕುಮಾರ (35) ಎಂದು ಗುರುತಿಸಲಾಗಿದೆ. ಹಾಗರಗುಂಡಗಿ ಗ್ರಾಮದ ಸುಮಾರು 14 ಜನ ಟ್ರಾವೆಲರ್‍ನಲ್ಲಿ ಕರ್ನಾಟಕ ಪ್ರವಾಸ ಕೈಗೊಂಡಿದ್ದರು. ಪ್ರವಾಸ ಮುಗಿಸಿಕೊಂಡು ಮರಳಿ ಹಾಗರಗುಂಡಗಿ ಗ್ರಾಮಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. 

bengaluru

ಅಪಘಾತದಲ್ಲಿ 11 ಜನರಿಗೆ ಸಣ್ಣಪುಟ್ಟಗಾಯಗಳಾಗಿದ್ದು, 4-5 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
 

bengaluru

LEAVE A REPLY

Please enter your comment!
Please enter your name here