ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದಾಸ್ಪದವಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರು: ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದಾಸ್ಪದವಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಜೈನ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆ ದುರದೃಷ್ಟಕರ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿಗಳಾಗಿದ್ದಾರೆ. ಅವರನ್ನು ಇಡೀ ಜಗತ್ತೇ ಗೌರವಿಸುತ್ತಿದೆ. ಅಂಥವರನ್ನು ಅಪಮಾನಿಸಿದ್ದರೆ ಅದನ್ನು ಒಪ್ಪುವುದು ಸಾಧ್ಯವಿಲ್ಲ ಎಂದಿದ್ದಾರೆ.
ಘಟನೆಯ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರವೇ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ಕೊಡಲಾಗಿದೆ. ಅವರು ಸದ್ಯದಲ್ಲೇ ವರದಿ ಕೊಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಏನಿದು ವಿವಾದ: ವಿವಾದಾತ್ಮಕ ವಿಡಿಯೋದಲ್ಲಿ ತಳ ಸಮುದಾಯದ ವ್ಯಕ್ತಿಯೊಬ್ಬ ಮೇಲ್ವರ್ಗದ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಿರು ನಾಟಕದಲ್ಲಿ ಪ್ರದರ್ಶಿಸಲಾಗಿದೆ. ಇದೇ ವೇಳೆ ಆತ ತಾನು ದಲಿತ ಎಂದು ಹೇಳಿಕೊಳ್ಳುವ ಸನ್ನಿವೇಶ ಬರುತ್ತದೆ. ಆಗ ಡೋಂಟ್ ಟಚ್ ಮಿ, ಟಚ್ ಮಿ ಎಂಬ ಹಾಡನ್ನು ಹಾಕಿರುವುದು ಕಂಡುಬಂದಿದೆ. ಹಾಗೆಯೇ ಈ ನಾಟಕದಲ್ಲಿ ಬಿ.ಆರ್. ಅಂಬೇಡ್ಕರ್ ಅವರನ್ನು ಬಿಯರ್ ಅಂಬೇಡ್ಕರ್ ಎಂದು ಅವಹೇಳನ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಸ್ಕಿಟ್ ನಲ್ಲಿ ಭಾಗಿಯಾಗಿರುವವರು, ಸ್ಕಿಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ವಿವಿ ವಿದ್ಯಾರ್ಥಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ. ಈ ರೀತಿಯ ಘಟನೆ ಅತ್ಯಂತ ಖಂಡನೀಯ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.@JainDeemedtbUnv Bangalore students Who made hate speech against Dalit community and our leader Dr.Babasaheb in their university event. Video is in next tweet.I filed complent today at @NandedPoliceAlso Rqstng @BlrCityPolice and @JainDeemedtbUnv take action against the student pic.twitter.com/zX3FZUGrJY— Aakshay Bansode (@Aakshay_Bansode) February 9, 2023
ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಇತ್ತೀಚಿಗೆ ಬಾಬಾಸಾಹೇಬ್ ಅಂಬೇಡ್ಕರ್ ಹಾಗು ದಲಿತ ಸಮುದಾಯಗಳ ಕುರಿತು ತೀರಾ ಅಸಭ್ಯವಾಗಿ, ನಿಂದನಾತ್ಮವಾಗಿ ಕಾರ್ಯಕ್ರಮ ನಡೆದಿರುವ ವಿಡಿಯೋ ಹರಿದಾಡುತ್ತಿದೆ. @BlrCityPolice @CPBlr ದಯವಿಟ್ಟು ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಈ ರೀತಿಯ ಘಟನೆ ಅತ್ಯಂತ ಖಂಡನೀಯ. pic.twitter.com/9L3XqQSSmw
— Karnataka Congress (@INCKarnataka) February 11, 2023