Home Uncategorized ಜೈನ ಮುನಿಶ್ರಿ ದೇಹದ ತುಂಡುಗಳು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನೆ, ನಾಳೆ ಅಂತ್ಯಸಂಸ್ಕಾರ

ಜೈನ ಮುನಿಶ್ರಿ ದೇಹದ ತುಂಡುಗಳು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನೆ, ನಾಳೆ ಅಂತ್ಯಸಂಸ್ಕಾರ

12
0
Advertisement
bengaluru

ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಬರ್ಬರ ಹತ್ಯೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಆರೋಪಿಗಳು ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಮೃತದೇಹವನ್ನು ಬಿಸಾಕಿದ್ದರು. ಬೆಳಗಾವಿ: ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಬರ್ಬರ ಹತ್ಯೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಆರೋಪಿಗಳು ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಮೃತದೇಹವನ್ನು ಬಿಸಾಕಿದ್ದರು.

ಶನಿವಾರ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ 25 ಅಡಿ ಆಳದಲ್ಲಿ ರಕ್ತಸಿಕ್ತ ಸೀರೆ, ಟವೆಲ್ ಪತ್ತೆಯಾಗಿತ್ತು.  30 ಅಡಿ ಆಳದಲ್ಲಿ ತಲೆಯ 2 ಭಾಗ, ಕೈ, ಕಾಲು, ತೊಡೆ, ಹೊಟ್ಟೆ ಸೇರಿದಂತೆ 9 ಭಾಗಗಳು ಪತ್ತೆಯಾಗಿವೆ. ದೇಹದ ತುಂಡುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಮುನಿಶ್ರಿ ಅವರನ್ನು ಚಿಕ್ಕೋಡಿ ತಾಲೂಕು ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದಲ್ಲಿಯೇ ಕೊಲೆ ಮಾಡಿದ ಆರೋಪಿಗಳು, ಶವವನ್ನು ಕಟಕಬಾವಿಗೆ ತಂದು, ತುಂಡುಗಳನ್ನಾಗಿ ಮಾಡಿ, ಬೋರ್ ವೆಲ್ ಒಳಗೆ ಹಾಕಿದ್ದರು. ಶನಿವಾರ ಬೆಳಗ್ಗೆಯಿಂದ ಸತತ 10 ಗಂಟೆ ಕಾರ್ಯಾಚರಣೆ ನಡೆಸಿದ ಪೊಲೀಸರು ಶವ ಹೊರ ತೆಗೆದರು. ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ಸಮಗ್ರವಾಗಿ ತನಿಖೆ ಮಾಡುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕೋಡಿ: ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಬರ್ಬರ ಹತ್ಯೆ

bengaluru bengaluru

ಜೈನ ಮುನಿಶ್ರೀ ಹತ್ಯೆ ಪ್ರಕರಣ ಸಂಬಂಧ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ. ಸಾಲ ಮರುಪಾವತಿ ಮಾಡುವಂತೆ ಕೇಳಿದ ಕಾರಣಕ್ಕೆ ಆರೋಪಿಗಳು ಜೈನಮುನಿಗಳನ್ನು ಹತ್ಯೆ ಮಾಡಿದ್ದಾರೆಂಬ ವಿಚಾರ ಪ್ರಾಥಮಿಕ ತನಿಖಾ ವರದಿಗಳಿಂದ ತಿಳಿದುಬಂದಿದೆ.

ನಾಳೆ ಅಂತ್ಯಸಂಸ್ಕಾರ: ಕಾಮಕುಮಾರ ನಂದಿ ಮಹಾರಾಜರ ಮರಣೋತ್ತರ ಪರೀಕ್ಷೆ ಇಂದು ರಾತ್ರಿಯೆಲ್ಲಾ ನಡೆಯಲಿದ್ದು, ನಾಳೆ ಹಿರೇಕೋಡಿ ಆಶ್ರಮದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ನಂದಿಪರ್ವತ ಆಶ್ರಮ ಟ್ರಸ್ಟ್ ನ ಅಧ್ಯಕ್ಷ ಡಾ. ಭೀಮಪ್ಪ ಉಗಾರೆ ಹೇಳಿದ್ದಾರೆ. ಕಾಮಕುಮಾರ ಮಹಾರಾಜರು ಯಾರಿಗೂ ಅನ್ಯಾಯ ಮಾಡಿದವರಲ್ಲ. ಅಂಥ ಮುನಿಯನ್ನೇ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜೈನ ಮುನಿಶ್ರೀ ಹತ್ಯೆ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಜೈನ ಸಮುದಾಯದ ಮುಖಂಡರು ಸಭೆ ನಡೆಸಿದ್ದು, ಹತ್ಯೆ ಖಂಡಿಸಿ ಸೋಮವಾರ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಶಾಸಕ ಅಭಯ್ ಪಾಟೀಲ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. 


bengaluru

LEAVE A REPLY

Please enter your comment!
Please enter your name here