Home Uncategorized ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಜುಲೈ 21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ 

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಜುಲೈ 21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ 

11
0

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಜುಲೈ 21 ಕ್ಕೆ ಮುಂದೂಡಿದೆ. ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಜುಲೈ 21 ಕ್ಕೆ ಮುಂದೂಡಿದೆ. ಅಂದು ಅವರ ವಿರುದ್ಧದ ಆರೋಪಗಳಿಗೆ ಅವರ ಪರ ವಕೀಲರು ಕೇಂದ್ರ ತನಿಖಾ ದಳ (ಸಿಬಿಐ)  ಉತ್ತರವನ್ನು ಸಲ್ಲಿಸಬೇಕು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್  ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಪ್ರಶ್ನಿಸಿದ್ದಾರೆ. 

ಮುಚ್ಚಿದ ಲಕೋಟೆಯ ವಿಷಯಗಳನ್ನು ಬಹಿರಂಗಪಡಿಸದಂತೆ ನ್ಯಾಯಾಲಯ ಇಂದು ಸಿಬಿಐಗೆ ತಡೆ ನೀಡಿತು. ಸಿಬಿಐ ವಕೀಲ ಪಿ ಪ್ರಸನ್ನ ಕುಮಾರ್ ಅವರು ಆಪಾದಿತನ ಅಕ್ರಮ ಆಸ್ತಿಯ ಅಂದಾಜು ಮೊತ್ತವನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಬಯಸಿದ್ದರು. ಆದಾಗ್ಯೂ, ಕೇಂದ್ರೀಯ ತನಿಖಾ ಸಂಸ್ಥೆ ಈಗಾಗಲೇ ಮುಚ್ಚಿದ ಲಕೋಟೆಯಲ್ಲಿ ಈ  ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ ಎಂದು ನ್ಯಾಯಮೂರ್ತಿ ಕೆ ನಟರಾಜನ್ ಹೇಳಿದರು. 

ಶಿವಕುಮಾರ್  2013ರಿಂದ 2018ರ ನಡುವೆ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಸಂಬಂಧ ಸೆಪ್ಟೆಂಬರ್ 3 ರಂದು ಸಿಬಿಐ ಎಫ್ ಐಆರ್ ದಾಖಲಿಸಿತ್ತು. ಇದನ್ನು ಶಿವಕುಮಾರ್ 2021ರಲ್ಲಿ  ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ನಮೂನೆ 126 ಮಾದರಿಯಲ್ಲಿ ಸಂಗ್ರಹಿಸಲಾದ 11 ಸಂಪುಟ, 2,412 ಪುಟಗಳ ವಿವರಗಳನ್ನು ಹೊರತುಪಡಿಸಿ 596 ಹೆಚ್ಚುವರಿ ದಾಖಲೆಗಳನ್ನು ಸಂಗ್ರಹಿಸಿರುವುದಾಗಿ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಈ ಪ್ರಕರಣದಲ್ಲಿ ಎಂಭತ್ನಾಲ್ಕು ಸಾಕ್ಷಿಗಳನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ. ಆದಾಯ ತೆರಿಗೆ ಇಲಾಖೆಯು 2017 ರಲ್ಲಿ ಶಿವಕುಮಾರ್ ಅವರ ಕಚೇರಿಗಳು ಮತ್ತು ನಿವಾಸಗಳಲ್ಲಿ ಶೋಧ ಮತ್ತು ಜಪ್ತಿ ಕಾರ್ಯಾಚರಣೆ ನಡೆಸಿತ್ತು. ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕನ ವಿರುದ್ಧ ತನ್ನದೇ ಆದ ತನಿಖೆ ಆರಂಭಿಸಿದ್ದು, ಇಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.

ಸೆಪ್ಟೆಂಬರ್ 25, 2019 ರಂದು ಸರ್ಕಾರದಿಂದ ಮಂಜೂರಾತಿ ನೀಡಲಾಯಿತಾದರೂ ಒಂದು ವರ್ಷದ ನಂತರ ಎಫ್‌ಐಆರ್ ದಾಖಲಿಸಲಾಯಿತು.

LEAVE A REPLY

Please enter your comment!
Please enter your name here