Home Uncategorized ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್: ಇಂದಿರಾ ಕ್ಯಾಂಟೀನ್​ನಲ್ಲಿ ಉಪಹಾರ, ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ

ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್: ಇಂದಿರಾ ಕ್ಯಾಂಟೀನ್​ನಲ್ಲಿ ಉಪಹಾರ, ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ

21
0

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದ್ದು, ಈ ವೇಳೆ ಇಂದಿರಾ ಕ್ಯಾಂಟೀನ್​ನಲ್ಲಿ ಉಪಹಾರ ಸೇವಿಸಿ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ್ದರು. ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದ್ದು, ಈ ವೇಳೆ ಇಂದಿರಾ ಕ್ಯಾಂಟೀನ್​ನಲ್ಲಿ ಉಪಹಾರ ಸೇವಿಸಿ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ್ದರು.

ಇಂದು ಬೆಳ್ಳಂ ಬೆಳಿಗ್ಗೆಯೇ ಬಿಬಿಎಂಪಿಯ ಯಾವುದೇ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡದೆ ದಿಢೀರ್ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಅಲ್ಲಿನ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು. ಮೊದಲು ದಾಸರಹಳ್ಳಿ ವಲಯದ ಚೊಕ್ಕಸಂದ್ರ ವಾರ್ಡ್‌ನ ಇಂದಿರಾ ಕ್ಯಾಂಟೀನ್‌ಗೆ ಬೆಳಿಗ್ಗೆ 9ರ ಸುಮಾರಿಗೆ ತೆರಳಿದ ಡಿ.ಕೆ.ಶಿ ತಿಂಡಿ ನೀಡುವಂತೆ ಕೇಳಿದರು. ಆದರೆ ಅಲ್ಲಿ ತಿಂಡಿ ಖಾಲಿಯಾಗಿತ್ತು. 280 ಪ್ಲೇಟ್ ತಿಂಡಿ ಖಾಲಿಯಾಗಿದೆ ಎಂದು ಕ್ಯಾಂಟೀನ್ ವ್ಯವಸ್ಥಾಪಕ ಹೇಳಿದಾಗ ಮಾಧ್ಯಮಮಿತ್ರರಿಗೆ ತಿಂಡಿಕೊಡಿಸೋಣ ಎಂದುಕೊಂಡಿದ್ದೆ ಆದರೆ ಖಾಲಿಯಾಗಿದೆಯಲ್ಲ ಎಂದು ಹಾಸ್ಯದ ದಾಟಿಯಲ್ಲಿ ಹೇಳಿದರು.

ಇದನ್ನೂ ಓದಿ: ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಕಲಬುರಗಿ ಬರಪೀಡಿತ ಜಿಲ್ಲೆ ಘೋಷಣೆ ಕುರಿತು ನಿರ್ಧಾರ: ಪ್ರಿಯಾಂಕ್ ಖರ್ಗೆ

ನಂತರ ದಾಸರಹಳ್ಳಿಯ 15ನೇ ವಾರ್ಡಿನ ಇಂದಿರಾ ಕಾಂಟೀನ್ ಗೆ ತೆರಳಿ ತಿಂಡಿ ಲಭ್ಯವಿದ್ದು, ಉಪ್ಪಿಟ್ಟು ಮತ್ತು ಕೇಸರಿಬಾತ್ ತಿಂದು ಆಹಾರದ ಗುಣಮಟ್ಟದ ಬಗ್ಗೆ ತಿಂಡಿ ತಿನ್ನುತ್ತಿದ್ದ ನಾಗರಿಕರನ್ನು ಮಾತನಾಡಿಸಿ ಮಾಹಿತಿ ಪಡೆದರು.

ಇಂದು ನಗರ‌ ಪ್ರದಕ್ಷಿಣೆ ನಿಮಿತ್ತ ಮಾಗಡಿ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದ್ದು, ಇದಕ್ಕೂ ಮುನ್ನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ನಲ್ಲಿ ಉಪಾಹಾರ ಸೇವಿಸಿದೆ. ಲಕ್ಷಾಂತರ ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಪಕ್ಷದ ಮಹತ್ತರ ಕೊಡುಗೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. pic.twitter.com/3q5yTvCQz1
— DK Shivakumar (@DKShivakumar) July 9, 2023

ಈ ಸಂದರ್ಭದಲ್ಲಿ ಕ್ಯಾಂಟೀನ್ ವ್ಯಕ್ತಿ ತಿಂಡಿಗೆ 5 ರೂ.ಗೆ ಬದಲು 10 ರೂ. ಪಡೆದಿದ್ದನ್ನು ಗಮನಿಸಿದ ಉಪಮುಖ್ಯಮಂತ್ರಿಗಳು ಅದನ್ನು ಪ್ರಶ್ನಿಸಿದರು. ಆಗ ಅವರು 2 ಪ್ಲೇಟ್ ತೆಗೆದುಕೊಂಡಿದ್ದಾರೆ ಎಂದು ಸಿಬ್ಬಂದಿ ಸಮಜಾಯಿಷಿ ನೀಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಇಂದಿರಾಕ್ಯಾಂಟೀನ್‌ನ ಕುಂದು ಕೊರತೆ ದೂರು ಸಲ್ಲಿಸುವ ಸಹಾಯವಾಣಿಗೆ ಕರೆ ಮಾಡಿಸಿದಾಗ ಅಲ್ಲೂ ದುರಸ್ಥಿಯಲ್ಲಿರುವುದರ ಮಾಹಿತಿ ಪಡೆದು ತಕ್ಷಣ ಸರಿಪಡಿಸಲು ಸೂಚಣೆ ನೀಡಿದರು. ಹಾಗೆಯೇ ಪ್ರತಿವಾರ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲಿಸುವಂತೆ ಪಾಲಿಕೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಹರಸಾಹಸ ಪಡುತ್ತಿದೆ: ಲಕ್ಷ್ಮಣ್ ಸವದಿ

ಇಂದಿರಾ ಕ್ಯಾಂಟಿನ್‌ಗೆ ಡಿಕೆಶಿ ದಿಢೀರ್ ಭೇಟಿ
ಇದಕ್ಕೂ ಮೊದಲು  ದಾಸರಹಳ್ಳಿ ಇಂದಿರಾ ಕ್ಯಾಂಟೀನ್​ಗೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​, ಸಾರ್ವಜನಿಕರೊಟ್ಟಿಗೆ ಆಹಾರದ ರುಚಿ ಬಗ್ಗೆ ಮಾಹಿತಿ ಪಡೆಯುತ್ತಾ ಕೇಸರಿಬಾತ್ ಉಪ್ಪಿಟ್ಟು ಸೇವಿಸಿದರು. ಈ ವೇಳೆ ಮಾತನಾಡಿದ ಅವರು, ‘ಬಜೆಟ್​ನಲ್ಲಿ ಅವರು ಎಷ್ಟೆ ಅನುದಾನ ನೀಡಲಿ, ನಾವು ರೆವೆನ್ಯೂ ಜನರೇಟ್ ಮಾಡುತ್ತೇವೆ. ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ ಹಾಕುವ ಮೂಲಕ ಬೆಂಗಳೂರು ಅಭಿವೃದ್ಧಿ ಮಾಡುತ್ತೇವೆ ಎಂದರು. ಇದಕ್ಕೂ ಮುನ್ನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್​ಗೆ ತೆರಳಿದ ಡಿಕೆ ಶಿವಕುಮಾರ್ ತಿಂಡಿ ನೀಡುವಂತೆ ಕೇಳಿದರು. ಆದರೆ ತಿಂಡಿ ಖಾಲಿಯಾಗಿತ್ತು. 

ಬೆಂಗಳೂರಿನ ದೊಡ್ಡಬಿದರಕಲ್ಲು ಪ್ರದೇಶದಲ್ಲಿರುವ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರಿನಲ್ಲಿ ಘನ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ಈ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. pic.twitter.com/x6pFTmdmZa
— DK Shivakumar (@DKShivakumar) July 9, 2023

ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ
ಇಂದಿರಾ ಕ್ಯಾಂಟೀನ್ ಭೇಟಿ ನಂತರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾಗಡಿ ರಸ್ತೆಯ ಸೀಗೆಹಳ್ಳಿ, ಕನ್ನಹಳ್ಳಿ, ದೊಡ್ಡಬಿದರಕಲ್ಲುಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೀಗೆಹಳ್ಳಿ ಘನತ್ಯಾಜ್ಯ ಸಂಸ್ಕಾರಣ ಘಟಕದಲ್ಲಿ 120 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಾಮರ್ಥ್ಯವಿದ್ದು, ಈ ಸಂಸ್ಕರಣಾ ಘಟಕವನ್ನು ಕೂಡಲೇ ಆರಂಭಿಸಲು ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಎಲ್ಲೆಂದರಲ್ಲಿ ಕಸ ಸುರಿದವರಿಗೆ ಅಂತಹವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳುವುದಾಗಿಯೂ ಹೇಳಿದರು. ಬೆಂಗಳೂರಿನ ಅಭಿವೃದ್ಧಿಗೆ ಸಂಪನ್ಮೂಲ ಕ್ರೂಢೀಕರಿಸಿ ಅಭಿವೃದ್ಧಿ ಮಾಡುತ್ತೇವೆ. ಆಸ್ತಿ ತೆರಿಗೆ ವಂಚನೆಗೆ ವಂನೆಗೂ ಕಡಿವಾಣ ಹಾಕಲಾಗುವುದು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯಕ್ತ ತುಷಾರ್‌ಗಿರಿನಾಥ್, ವಿಶೇಷ ಆಯುಕ್ತರಾದ ಹರೀಶ್‌ಕುಮಾರ್, ಜಂಟಿ ಆಯುಕ್ತ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೇಂದ್ರದ ಹೆಚ್ಚುವರಿ ಹಣದಿಂದಾಗಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ನೀಡಲು ಸಾಧ್ಯವಾಯಿತು: ಮಾಜಿ ಸಿಎಂ ಬೊಮ್ಮಾಯಿ

ದಾರಿ ತಪ್ಪಿದ ಎಸ್ಕಾರ್ಟ್ ವಾಹನ, ಢಿಕ್ಕಿ
ಬೆಂಗಳೂರಿನ 2 ಸ್ಥಳಗಳಿಗೆ ಡಿಕೆ ಶಿವಕುಮಾರ್ ಸರ್ಪ್ರೈಸ್ ವಿಸಿಟ್ ಮಾಡಲಿದ್ದು, ರಸ್ತೆಯಲ್ಲಿ ತೆರೆಳುವ ವೇಳೆ ಬೆಂಗಾವಲು ವಾಹನ ದಾರಿ ತಪ್ಪಿದ ಘಟನೆ ನಡೆದಿದೆ. ಡಿಕೆಸಿ ವಾಹನ ಬಿಟ್ಟು ಮುಂದೆ ಹೋಗಿದ್ದು, ಬಳಿಕ ತಿರುವು ತೆಗೆದುಕೊಂಡು ಬಂದಿದೆ. ಅಲ್ಲಿಯವರೆಗೆ ಮಾರ್ಗ ಮಧ್ಯೆ ಡಿಕೆ ಶಿವಕುಮಾರ್ ವಾಹನ ನಿಲ್ಲಿಸಿದ್ದಾರೆ. ಅಂತೆಯೇ ಮಾಗಡಿ ರೋಡ್​ನಲ್ಲಿ ಡಿಕೆ ವಾಹನ ಹಿಂಬಾಲಿಸುತ್ತಿದ್ದ ಪಾಲಿಕೆ ಆಯುಕ್ತರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಪಾಲಿಕೆ ವಾಹನ ಗುದ್ದಿದೆ. ಅದೃಷ್ಟವಶಾತ್ ಡಿಕ್ಕಿ ಹೊಡೆದ ವಾಹನದಲ್ಲಿ ಕಮಿಷನರ್ ಇರಲಿಲ್ಲ.

LEAVE A REPLY

Please enter your comment!
Please enter your name here