Home Uncategorized ಡಿ.ಜೆ.ಹಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ

ಡಿ.ಜೆ.ಹಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ

8
0
Advertisement
bengaluru

ಡಿಜೆ ಹಳ್ಳಿಯ ಕೆಎಚ್‌ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ನನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಂಗಳೂರು: ಡಿಜೆ ಹಳ್ಳಿಯ ಕೆಎಚ್‌ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ನನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಎರಡು ಬೈಕ್‌ನಲ್ಲಿ ಬಂದ ನಾಲ್ವರು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಕಪಿಲ್‌ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಮಾಹಿತಿ ಪಡೆದರು.

ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮೃತ ರೌಡಿಶೀಟರ್ ಕಪಿಲ್‌, 2014ರ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಡಿ.ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ಪತ್ರೆಗೆ ಡಿಸಿಪಿ ಭೀಮಾಶಂಕರ ಗುಳೇದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜೋಡಿ ಕೊಲೆ: ಹಾಡುಹಗಲೇ ಏರೋನಿಕ್ಸ್ ಕಂಪನಿ ಸಿಇಒ, ಎಂಡಿ ಬರ್ಬರ ಹತ್ಯೆ

bengaluru bengaluru

ರಾತ್ರಿ ಎಂಟು ಗಂಟೆ ಸುಮಾರಿಗೆ ಸ್ನೇಹಿತರನ್ನು ನೋಡಲು ಡಿ.ಜೆ.ಹಳ್ಳಿಗೆ ಕಪಿಲ್ ಬಂದಿದ್ದ. ಈ ವೇಳೆ ಎರಡು ಬೈಕ್‌ಗಳಲ್ಲಿ ಹೆಲ್ಮೆಟ್  ಧರಿಸಿ ದುಷ್ಕರ್ಮಿಗಳು ಬಂದಿದ್ದರು. ಬೈಕ್‌ವೊಂದರ ನಂಬರ್ ಪ್ಲೇಟ್ ಮೇಲೆ ಅನುಮಾನ ಪಟ್ಟ ಕಪಿಲ್‌, ನಂಬರ್ ಪ್ಲೇಟ್ ನೋಡುವಂತೆ ಸ್ನೇಹಿತನನ್ನು ಕಳುಹಿಸಿದ್ದಾನೆ.

ಇದನ್ನೂ ಓದಿ: ಹುಡುಗಿ ವಿಚಾರಕ್ಕೆ ಇಬ್ಬರು ಯುವಕರ ಮಧ್ಯೆ ಜಗಳ: ಕೊಲೆಯಲ್ಲಿ ಅಂತ್ಯ

ಸ್ನೇಹಿತ ಹೋಗುತ್ತಿದ್ದಂತೆ ಕಪಿಲ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸುಮಾರು ನೂರು ಮೀಟರ್ ಅಟ್ಟಿಸಿಕೊಂಡು ಹೋಗಿ ಕಪಿಲ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕಪಿಲ್‌, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


bengaluru

LEAVE A REPLY

Please enter your comment!
Please enter your name here