Home Uncategorized ತಂತ್ರಜ್ಞಾನದಲ್ಲಿ ಭಾರತ ನಂಬರ್ 1 ಆಗಬೇಕು, ಅದನ್ನು ಮಾಡುವುದು ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ: ಗೃಹ ಸಚಿವ...

ತಂತ್ರಜ್ಞಾನದಲ್ಲಿ ಭಾರತ ನಂಬರ್ 1 ಆಗಬೇಕು, ಅದನ್ನು ಮಾಡುವುದು ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ: ಗೃಹ ಸಚಿವ ಅಮಿತ್ ಶಾ

15
0
bengaluru

ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.  ಹುಬ್ಬಳ್ಳಿ: ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. 

ಇಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶದಲ್ಲಿ 2014ರಲ್ಲಿ ಮಹತ್ವದ ಪರಿವರ್ತನೆಯಾಯಿತು. ಕೇವಲ 8 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿಯಾಗಿದೆ ಎಂದು ನುಡಿದರು. 

ವಿಶ್ವದೆದುರು ಭಾರತವನ್ನ ನಾಯಕ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಇಡೀ ವಿಶ್ವಕ್ಕೆ ಭಾರತದ ಶಕ್ತಿ ತೋರಿಸಬೇಕಿದೆ. ಮಹಾನ್ ಭಾರತದ ಕನಸನ್ನ ಯುವಜನತೆ ನನಸು ಮಾಡಬೇಕು. ಟೆಕ್ನಾಲಜಿಯಲ್ಲಿ ಭಾರತ ನಂ 1 ಆಗಬೇಕು. ಅದನ್ನು ಮಾಡುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಸ್ವಾತಂತ್ರ ಹೋರಾಟಗಾರರ ಕನಸು ನನಸು ಮಾಡಬೇಕಿದೆ ಎಂದರು. 

ನೀವು ದೇಶಕ್ಕಾಗಿ ನಿಮ್ಮ ಜೀವನವನ್ನು ತ್ಯಾಗ ಮಾಡಲು ಸಾಧ್ಯವಾಗದಿದ್ದರೆ ನಿಮ್ಮ ದೇಶಕ್ಕಾಗಿ ಜೀವನ ನಡೆಸಿ ಜಗತ್ತಿನಲ್ಲಿ ನಂಬರ್ 1 ಸ್ಥಾನಕ್ಕೆ ತನ್ನಿ, ಪ್ರಧಾನಿ ಮೋದಿಯವರು ಯುವಜನತೆಯ ಸಾಧನೆಗೆ ನಿಮಗೆ ಬೇಕಾದ ಅನೇಕ ಅವಕಾಶಗಳನ್ನು ಒದಗಿಸಿದ್ದಾರೆ.  ಎಂದರು. 

ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಕೆ ಎಲ್ ಇ ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಹಾಗೂ ಕೆಎಲ್ಇ ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಉಪಸ್ಥಿತರಿದ್ದರು. ಇಂದು ಕೆ.ಎಲ್.ಇ ಸಂಸ್ಥೆಯ ಬಿ.ವಿ.ಭೂಮರೆಡ್ಡಿ ತಾಂತ್ರಿಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ @AmitShah ಅವರೊಂದಿಗೆ ಪಾಲ್ಗೊಂಡೆನು. 1/2 pic.twitter.com/bxQLMTUZqh— Basavaraj S Bommai (@BSBommai) January 28, 2023

LEAVE A REPLY

Please enter your comment!
Please enter your name here