Home Uncategorized ತೀರ್ಥಹಳ್ಳಿಯಲ್ಲಿ 2 ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂ. ಮಂಜೂರು

ತೀರ್ಥಹಳ್ಳಿಯಲ್ಲಿ 2 ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂ. ಮಂಜೂರು

16
0

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಹೊಸ ಸೇತುವೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂ. ಮಂಜೂರು ಮಾಡಿದೆ. ಸಚಿವ ಆರಗ ಜ್ಞಾನೇಂದ್ರ ಬೇಡಿಕೆಗೆ ಆರ್ಥಿಕ ಇಲಾಖೆಯೂ, ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ತೀರ್ಥಹಳ್ಳಿ ತಾಲೂಕಿನ ತೂದೂರು-ಮುಂಡುವಳ್ಳಿ ಗ್ರಾಮಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 25.65 ಕೋಟಿ ರೂ. ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.  ಹೊಸನಗರ ತಾಲೂಕಿನ ಕಾರಣಗಿರಿ-ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 24.36 ಕೋಟಿ ರೂ. ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ಎರಡು ಯೋಜನೆಗಳ ಮಂಜೂರಾತಿಗೆ ಬೇಡಿಕೆ ಮಂಡಿಸಿ  ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಸ್ತಾವನೆ ಸಲ್ಲಿಸಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಕಲು ಬಳಿಯ ತುಂಬ್ರಮನೆಯಲ್ಲಿ ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಕೊರೋನಾ ಲಾಕ್ ಡೌನ್ ಹಾಗೂ ಮಳೆಗಾಲದ ಕ್ಲಿಷ್ಟಕರ ಸನ್ನಿವೇಶದಲ್ಲಿ, ಹಲವು ಅಡೆತಡೆ ಹಾಗೂ ಕಠಿಣ ಸವಾಲು ಎದುರಿಸಿ ಕೇವಲ ಎರಡೇ ತಿಂಗಳಿನ‌ಲ್ಲಿ ಸೇತುವೆ ನಿರ್ಮಿಸಲಾಗಿದೆ.@BSBommai@BJP4Karnataka pic.twitter.com/5K66kDEhae

— Araga Jnanendra (@JnanendraAraga) November 24, 2022

ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಕಲು ಬಳಿಯ ತುಂಬ್ರಮನೆಯಲ್ಲಿ ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಕೊರೋನಾ ಲಾಕ್ ಡೌನ್ ಹಾಗೂ ಮಳೆಗಾಲದ ಕ್ಲಿಷ್ಟಕರ ಸನ್ನಿವೇಶದಲ್ಲಿ, ಹಲವು ಅಡೆತಡೆ ಹಾಗೂ ಕಠಿಣ ಸವಾಲು ಎದುರಿಸಿ ಕೇವಲ ಎರಡೇ ತಿಂಗಳಿನ‌ಲ್ಲಿ ಸೇತುವೆ ನಿರ್ಮಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ಹಂಚಿಕೊಂಡಿದ್ದಾರೆ.

ಸುತ್ತಮುತ್ತಲಿನ ಹತ್ತಾರು ಊರುಗಳಿಗೆ ಕಟ್ಟೆಹಕ್ಕಲು ಮುಖ್ಯರಸ್ತೆಯನ್ನು ಸಂಪರ್ಕಿಸುವ ಈ ಸೇತುವೆಯನ್ನು ತುರ್ತಾಗಿ ನಿರ್ಮಿಸಬೇಕಾಗಿತ್ತು. ಶೀಘ್ರ ಕಾಮಗಾರಿ ಮುಗಿಸಿ ಜನರ ಓಡಾಟಕ್ಕೆ ಅನುಕೂಲ ಕಲ್ಪಿಸಲಾಗಿದೆ. pic.twitter.com/r6u9roBbHP

— Araga Jnanendra (@JnanendraAraga) November 24, 2022

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

LEAVE A REPLY

Please enter your comment!
Please enter your name here