Home Uncategorized ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಕಾರು ಛಿದ್ರ ಛಿದ್ರ: ನವದಂಪತಿ ದುರ್ಮರಣ

ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಕಾರು ಛಿದ್ರ ಛಿದ್ರ: ನವದಂಪತಿ ದುರ್ಮರಣ

10
0
bengaluru

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಮುಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ಜೋಡಿ ಮೃತಪಟ್ಟಿದೆ. ಮೃತರನ್ನು ಅರಸಿಕೆರೆ ಮೂಲದ 35 ವರ್ಷದ ರಘು ಮತ್ತು ತಿಗಳನಹಳ್ಳಿ ಮೂಲದ 28 ವರ್ಷದ ಅನುಷಾ ಎಂದು ಗುರುತಿಸಲಾಗಿದೆ. 

ಇದನ್ನೂ ಓದಿ: ಹಿಟ್ ಅಂಡ್ ರನ್ ಪ್ರಕರಣ: ದಾವಣಗೆರೆಯಲ್ಲಿ ಅಪಘಾತ, ಬೈಕ್‌ನಲ್ಲಿದ್ದ ಮೂವರು ಯುವಕರ ಸಾವು

ರಘು ಮತ್ತು ಅನುಷಾ ದಂಪತಿ ಇಬ್ಬರೂ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿದ್ದು ಸಂಬಂಧಿಕರ ಮದುವೆಗೆಂದು ಬಳ್ಳಾರಿ ಕಡೆಗೆ ತೆರಳುತ್ತಿದ್ದಾಗ ಹುಳಿಯಾರ್ ಗೇಟ್ ಬಳಿ ಅಪಘಾತ ಸಂಭವಿಸಿದೆ. 

bengaluru

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

bengaluru

LEAVE A REPLY

Please enter your comment!
Please enter your name here