Home Uncategorized ತುಮಕೂರು: ಮಗಳನ್ನು ಕತ್ತು ಹಿಸುಕಿ ಕೊಂದ ಮಹಿಳೆ ಬಂಧನ

ತುಮಕೂರು: ಮಗಳನ್ನು ಕತ್ತು ಹಿಸುಕಿ ಕೊಂದ ಮಹಿಳೆ ಬಂಧನ

10
0
Advertisement
bengaluru

ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ  ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ. ತುಮಕೂರು: ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ  ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.

ಹೇಮಲತಾ ಎಂಬ ಆರೋಪಿಯು ಶುಕ್ರವಾರ ತನ್ನ ಮಗಳು ತನ್ವಿತಾಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಳು. ಬಾಲಕಿಯ ಕಿರುಚಾಟ ಕೇಳಿ ಅಕ್ಕಪಕ್ಕದವರು ಮನೆಗೆ ಬಂದು ಹೇಮಲತಾಳಿಂದ  ಮಗುವನ್ನು ಕಿತ್ತುಕೊಂಡಿದ್ದಾರೆ. ಆದರೆ ತನ್ವಿತಾ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಬೆಂಗಳೂರು: ಕುಡಿದ ಅಮಲಿನಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಕೊಲೆ!

ಮಾಹಿತಿ ಪಡೆದ ಪೊಲೀಸರು ಹೇಮಲತಾ ಅವರನ್ನು ಬಂಧಿಸಿದ್ದಾರೆ. ಹೇಮಲತಾ ಮಾನಸಿಕ ಅಸ್ವಸ್ಥಳಾಗಿದ್ದಳು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಮಾನಸಿಕ ಅಸ್ವಸ್ಥೆ ಮಗುವಿನೊಂದಿಗೆ ಏಕಾಂಗಿಯಾಗಿರಲು  ಸಾಧ್ಯವೇ ಎಂದು ಪೊಲೀಸರು ಪ್ರಶ್ನಿಸಿದ್ದಾರೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bengaluru bengaluru

bengaluru

LEAVE A REPLY

Please enter your comment!
Please enter your name here