ಕರಾವಳಿ ತುಳುನಾಡಿನ ಜನರ ಆರಾಧ್ಯ ದೈವವಾದ ಗುಳಿಗ ದೈವದ ಆಧಾರಿತ ‘ಶಿವಧೂತೆ ಗುಳಿಗೆ’ ನಾಟಕ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು ಸಚಿವರು ಗುಳಿಗ ದೈವದ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂಬ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ತೀರ್ಥಹಳ್ಳಿ: ಕರಾವಳಿ ತುಳುನಾಡಿನ ಜನರು ಮೂಲತಃ ದೈವ ಆರಾಧಕರು. ಆರಾಧ್ಯ ದೈವವಾದ ಗುಳಿಗ ದೈವದ ಆಧಾರಿತ ‘ಶಿವಧೂತೆ ಗುಳಿಗೆ’ ನಾಟಕ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು ಸಚಿವರು ಗುಳಿಗ ದೈವದ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂಬ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ.
ಅದಕ್ಕೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಗೃಹ ಸಚಿವರು ಸ್ಪಷ್ಟನೆ ನೀಡಿದ್ದಾರೆ. ರಂಗಭೂಮಿಯಲ್ಲಿ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಪ್ರದರ್ಶನ ನೀಡುತ್ತಿರುವ ಕಲಾವಿದರು ಹಾಗೂ ವಿಶೇಷವಾಗಿ ನಿರ್ದೇಶಕ ಶ್ರೀ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಸೃಜನಶೀಲತೆ ಬಗ್ಗೆ ಅಭಿಮಾನ ಇದೆ. ಆದರೆ, ಜನರ ವಿಶ್ವಾಸ ಕಳೆದುಕೊಂಡ ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕರು, ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಮಾಡಿದ್ದಾರೆ.
ಈ ಮೂಲಕ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನ ಮಾಡಿರುವುದನ್ನು ಪ್ರಸ್ತಾಪಿಸಿದ್ದೇನೆಯೇ ಹೊರತು, ನಾಟಕದ ಬಗ್ಗೆ ಅಥವಾ ದೈವದ ವಿರುದ್ಧ ಮಾತನಾಡಿಲ್ಲ. ನಾನಾಡಿದ ಮಾತುಗಳಿಗೆ ಅಪಾರ್ಥ ಕಲ್ಪಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿರುವ ಕುಹಕಿಗಳ ಉದ್ದೇಶ ಈಡೇರುವುದಿಲ್ಲ ಎಂದು ಹೇಳಿದ್ದಾರೆ.
ಈ ಮೂಲಕ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನ ಮಾಡಿರುವುದನ್ನು ಪ್ರಸ್ತಾಪಿಸಿದ್ದೇನೆಯೇ ಹೊರತು, ನಾಟಕದ ಬಗ್ಗೆ ಅಥವಾ ದೈವದ ವಿರುದ್ಧ ಮಾತನಾಡಿಲ್ಲ.
ನಾನಾಡಿದ ಮಾತುಗಳಿಗೆ ಅಪಾರ್ಥ ಕಲ್ಪಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿರುವ ಕುಹಕಿಗಳ ಉದ್ದೇಶ ಈಡೇರುವುದಿಲ್ಲ.
— Araga Jnanendra (@JnanendraAraga) March 16, 2023
ತುಳುನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಆರಾಧಿಸುವ ಗುಳಿಗ ದೈವವನ್ನು ಆಧರಿಸಿ, ರಚಿಸಿರುವ ಪೌರಾಣಿಕ ನಾಟಕದ ಬಗ್ಗೆ ನನಗೆ ಅಪಾರ ಭಕ್ತಿ, ಮೆಚ್ಚುಗೆ ಇದೆ. ದೈವಗಳ ಬಗ್ಗೆ ಅಪಾರ ಭಕ್ತಿ, ಗೌರವ ಹೊಂದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಗೃಹ ಸಚಿವರು ಹೇಳಿದ್ದೇನು?: ತೀರ್ಥಹಳ್ಳಿಯ ಎಪಿಎಂಸಿ ಸಮೀಪ ನಡೆದ ರೈತ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದ್ದ ಗೃಹಸಚಿವರು, ”ಮಹಿಳೆಯರ ಕಿವಿ ಮೇಲೆ ಜಾಗವೇ ಇಲ್ಲ, ಮನೆಮನೆಗೆ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದಾರೆ. ನಿನ್ನೆಯಿಂದ ಇಲ್ಲಿ ಎಂಥದೋ ಗುಳಿಗೆ, ಗುಳಿಗೆ ಅಂತ ಹಾಕಿದ್ದಾರೆ. ವಾಲ್ ಪೋಸ್ಟ್ ನಲ್ಲಿ ನಿನ್ನೆ ರಾತ್ರಿ ಎಂಥದೋ ನಾಟಕ. ಇದು ಬಹಳ ಅಪಾಯ. ಇವರು ಯಾವ ಗುಳಿಗೆ ಕೊಡ್ತಾರೆ ಅಂತ ಗೊತ್ತಿಲ್ಲ, ಜಾಪಾಳ್ ಮಾತ್ರೆ ಗುಳಿಗೆ ಕೊಟ್ರು ಕೊಡಬಹುದು. ಇವರು ಹೊಸ ಹೊಸ ನಾಟಕ ಬೇರೆ ಶುರುಮಾಡಿದ್ದಾರೆ” ಎಂದು ಹೇಳಿದ್ದರು.
ಕರಾವಳಿ ಜನರು ಭಕ್ತಿ-ಶ್ರದ್ಧೆಯಿಂದ ಆರಾಧಿಸುವ ಗುಳಿಗ ದೈವವನ್ನು ಗುಳಿಗೆ ಎಂದು ವ್ಯಂಗ್ಯದಿಂದ ಹೇಳಿದ್ದು ವ್ಯಾಪಕ ಟೀಕೆ, ವಿರೋಧ ವ್ಯಕ್ತವಾಗಿತ್ತು.