Home Uncategorized ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಸಮಿತಿ ರಚಿಸಿದ ರಾಜ್ಯ ಸರ್ಕಾರ

ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಸಮಿತಿ ರಚಿಸಿದ ರಾಜ್ಯ ಸರ್ಕಾರ

16
0

ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ. ಬೆಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ.
     
ಸಮಿತಿಯ ನೇತೃತ್ವವನ್ನು ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಮೋಹನ್‌ ಆಳ್ವ ವಹಿಸಿಕೊಂಡಿದ್ದಾರೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ ಕುಮಾರ್‌ ಅವರು ಟ್ವಿಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ.
— Sunil Kumar Karkala (@karkalasunil) January 30, 2023

“ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ” ಎಂದಿದ್ದಾರೆ.

LEAVE A REPLY

Please enter your comment!
Please enter your name here