Home Uncategorized ದಾವಣಗೆರೆ: ಮಹಿಳೆಯ ಗಂಟಲು ಸೀಳಿ ಕೊಲೆ, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ

ದಾವಣಗೆರೆ: ಮಹಿಳೆಯ ಗಂಟಲು ಸೀಳಿ ಕೊಲೆ, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ

60
0

ಗುರುವಾರ ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ. ದಾವಣಗೆರೆ: ಗುರುವಾರ ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

ಸಂತ್ರಸ್ತೆ ಚಾಂದ್ ಸುಲ್ತಾನ(28) ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ ಹರಿತವಾದ ಆಯುಧದಿಂದ ಆಕೆಯ ಕತ್ತು ಸೀಳಿದ್ದಾನೆ. ಈ ವೇಳೆ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳದಿಂದ ಪರಾರಿಯಾಗಿದ್ದ ಸಾದತ್ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದಾಗ್ಯೂ, ಆತನೇ ಸ್ವತಃ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಸುಲ್ತಾನಾ ದಾವಣಗೆರೆಯ ವಿನೋಭಾ ನಗರದವರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಹೇಳಿದ್ದಾರೆ. ಹರಿಹರದ ನಿವಾಸಿಯಾಗಿದ್ದ ಅಯೂಬ್ ಎಂಬುವವರೊಂದಿಗೆ ಸುಲ್ತಾನಾ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಮದುವೆಯಾಗಬೇಕಿತ್ತು ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here