ದಿವಂಗತ ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಕನಸಿನಂತೆಯೇ ನವೀಕೃತ ಬೆಳಗಾವಿ ರೈಲು ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ ಎಂದು ಸಂಸದೆ ಮಂಗಳಾ ಅಂಗಡಿ ಅವರು ಸೋಮವಾರ ಕಣ್ಣೀರಿಟ್ಟರು. ಬೆಳಗಾವಿ: ದಿವಂಗತ ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಕನಸಿನಂತೆಯೇ ನವೀಕೃತ ಬೆಳಗಾವಿ ರೈಲು ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ ಎಂದು ಸಂಸದೆ ಮಂಗಳಾ ಅಂಗಡಿ ಅವರು ಸೋಮವಾರ ಕಣ್ಣೀರಿಟ್ಟರು.
198 ಕೋಟಿ ವೆಚ್ಚದಲ್ಲಿ ಬೆಳಗಾವಿ ನಗರದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಸುರೇಶ್ ಅಂಗಡಿ ಅವರ ಕನಸಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆದುಕೊಂಡು ಬಂದು ಉದ್ಘಾಟನೆ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಈಗ ಅವರು ನಮ್ಮ ಜೊತೆ ಇಲ್ಲ ಎಂದು ಹೇಳುತ್ತಾ ಮಂಗಳಾ ಅಂಗಡಿಯವರು ಭಾವುಕರಾದರು.
ಬಳಿಕ ಇಷ್ಟರ ಮಟ್ಟಿಗೆ ಸುಸಜ್ಜಿತವಾದ ಈ ರೈಲು ನಿಲ್ದಾಣ ನವೀಕರಣಗೊಂಡಿದ್ದಕ್ಕೆ ಗುತ್ತಿಗೆದಾರರು ಹಾಗೂ ಹಿರಿಯ ಅಧಿಕಾರಿಗಳು ಹಾಗೂ ರೈಲ್ವೆ ಇಲಾಖೆ ಉದ್ಯೋಗಿಗಳಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಮೋದಿ ಅವರಿಂದ ಉದ್ಘಾಟನೆ ಕಾರ್ಯ ನೆರವೇರುತ್ತಿರುವುದು ತುಂಬಾ ಸಂತೋಷ ತಂದಿದೆ. ಸುರೇಶ್ ಅಂಗಡಿ ಅವರ ಕನಸು ನನಸಾಗುತ್ತಿದೆ ಎಂದು ಸಂಸದೆ ಹರ್ಷ ವ್ಯಕ್ತಪಡಿಸಿದರು.