ಅಸ್ವಸ್ಥಗೊಂಡಿದ್ದ 6 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಒಹೋಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಗ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದೇವನಹಳ್ಳಿ: ಅಸ್ವಸ್ಥಗೊಂಡಿದ್ದ 6 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಒಹೋಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಗ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಓವರ್ ಡೋಸ್ ನೀಡಲಾಗಿದ್ದು ವೈದ್ಯರ ನಿರ್ಲಕ್ಷ್ಯವೇ ಮಗುವಿನ ಕಾರಣ ಎಂದು ಪೋಷಕರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ: ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿ ಹುಬ್ಬಳ್ಳಿಯ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ!
ಹೊಸಕೋಟೆ ತಾಲೂಕಿನ ಕಂಬಳಿಪುರ ನಿವಾಸಿ ವೇಣುಗೋಪಾಲ್ ಎಂಬುವರ 6 ತಿಂಗಳ ಮಗು ಮೃತಪಟ್ಟಿದ್ದು ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮಗುವಿನ ಸಾವಿನ ನಂತರ ಆಸ್ಪತ್ರೆಗೆ ಮುತ್ತಿಗೆ ಹಾಕಿದ ಪೋಷಕರು, ಸಂಬಂಧಿಕರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟರು.