Home Uncategorized ದೇವನಹಳ್ಳಿ: 3 ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ!

ದೇವನಹಳ್ಳಿ: 3 ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ!

9
0
Advertisement
bengaluru

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ. ದೇವನಹಳ್ಳಿ: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.

ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತ ದಂಪತಿ.

ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು.

ಇದನ್ನೂ ಓದಿ: ಖಾಸಗಿ ಕ್ಷಣಗಳ ವಿಡಿಯೋ ವೈರಲ್; ದಾವಣಗೆರೆಯ ಇಬ್ಬರು ಪದವಿ ವಿದ್ಯಾರ್ಥಿಗಳು ಆತ್ಮಹತ್ಯೆ!

bengaluru bengaluru

ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇಬ್ಬರು, ಎರಡು ದಿನದಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದರು. ಆದರೆ ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್: ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ಮಾಡೆಲ್ ಆತ್ಮಹತ್ಯೆ!

ಸ್ಥಳೀಯರು ಮತ್ತು ಪೊಲೀಸರಿಂದ ನೀರಿ‌ನಲ್ಲಿದ್ದ ಮೃತದೇಹ ಹೊರತೆಗೆದು ತನಿಖೆ ನಡೆಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆ ಮೃತದೇಹಗಳು ಪತ್ತೆಯಾಗಿದ್ದು, ತಕ್ಷಣ ತೋಟದ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ವಿಜಯಪುರ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here