ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಹಾಗು ಗದಗ್ ಜಿಲ್ಲೆಗೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಕಲಾ ವಿಭಾಗದಲ್ಲಿ ಬೆಂಗಳೂರಿನ ಮೇಧಾ.ಡಿ. ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಶೇ 81.15 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮೀ ಮೊದಲ ಸ್ಥಾನ ಪಡೆದುಕೊಂಡಿದ್ದು, 598 ಅಂಕ ಗಳಿಸಿದ್ದಾರೆ.