ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ (Praveen Kammar) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಅವರ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಂಗಳವಾರ ತಡರಾತ್ರಿ ಕೆಲವು ಕಾರಣಗಳಿಗೆ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಚಾಕು ಇರಿತದಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
With deep anguish, we share the news of the murder of BJYM Dharwad Unit Executive Member & Kottur Gram Panchayat VP, Sri Praveen Kammar.
He was brutally murdered by suspected political rivals late last night.
BJYM demands immediate arrest of the killers & pray for his Sadgati. pic.twitter.com/eI6SW1nKEh
— Tejasvi Surya (@Tejasvi_Surya) April 19, 2023
ರಾಜಕೀಯ ವಿಷಯವಾಗಿಯೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರವೀಣ ಕಮ್ಮಾರ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡಿದ್ದ. ನಿನ್ನೆ ತಾನೇ ಅಮೃತ ದೇಸಾಯಿ ಅವರ ನಾಮಪತ್ರ ಸಲ್ಲಿಕೆಯ ರ್ಯಾಲಿಯಲ್ಲೂ ಭಾಗಿಯಾಗಿದ್ದರು. ಆದರೆ, ಅದೇ ದಿನ ರಾತ್ರಿ ಕೋಟೂರಿನಲ್ಲಿ ನಡೆದ ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಕಮ್ಮಾರನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಕಂಬನಿ
BJYM ಧಾರವಾಡ ಘಟಕದ ಕಾರ್ಯನಿರ್ವಾಹಕ ಸದಸ್ಯ ಹಾಗೂ ಕೊಟ್ಟೂರು ಗ್ರಾಮ ಪಂಚಾಯತ್ ವಿಪಿ ಪ್ರವೀಣ್ ಕಮ್ಮಾರ್ ಅವರ ಹತ್ಯೆಯ ಸುದ್ದಿ ತೀವ್ರ ದುಃಖ ತರಿಸಿದೆ. ನಿನ್ನೆ ತಡರಾತ್ರಿ ಶಂಕಿತ ರಾಜಕೀಯ ವಿರೋಧಿಗಳು ಪ್ರವೀಣ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಂತಕರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸುತ್ತೇವೆ ಮತ್ತು ಅವರ ಸದ್ಗತಿಗಾಗಿ ಪ್ರಾರ್ಥಿಸುತ್ತೇವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.
