Home Uncategorized ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರು ಸ್ಥಳದಲ್ಲಿಯೇ ದುರ್ಮರಣ

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರು ಸ್ಥಳದಲ್ಲಿಯೇ ದುರ್ಮರಣ

22
0

ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿ ನಿಂತಿದ್ದ ಗುದ್ದಿದ ಪರಿಣಾಮ ಓರ್ವ ಪಾದಚಾರಿ ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ನಡೆದಿದೆ. ಧಾರವಾಡ: ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿ ನಿಂತಿದ್ದ ಗುದ್ದಿದ ಪರಿಣಾಮ ಓರ್ವ ಪಾದಚಾರಿ ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ನಡೆದಿದೆ.

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಾಗಪ್ಪ ಈರಪ್ಪ ಮುದ್ದೋಜಿ(29), ಅವರಾದಿ ಗ್ರಾಮದ ಮಹಂತೇಶ್ ಬಸಪ್ಪ ಮುದ್ದೊಜಿ(40), ಬಸವರಾಜ್ ಶಿವಪುತ್ರಪ್ಪ ನರಗುಂದ(35), ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ, ಈರಣ್ಣಾ ಗುರುಸಿದ್ದಪ್ಪ ರಾಮನಗೌಡರ್ (35) (ಪಾದಚಾರಿ) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.  ಬೆಳಗಾವಿಯಿಂದ ಧಾರವಾಡ ಕಡೆಗೆ ತೆರಳುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.  ವಿಷಯ ತಿಳಿಯುತ್ತಿದ್ದಂತೆಯೇ  ಗರಗ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. Five dead after a car (Belagavi reigstration) rammed a lorry on #Dharwas #Belagavi (NH4) near #Garag. Four injured and being treated at KIMS and district hospital, reports @HiremathTnie @NewIndianXpress @XpressBengaluru @KannadaPrabha @Namma_Dharwad @allaboutbelgaum pic.twitter.com/rycen6EyyG— Amit Upadhye (@Amitsen_TNIE) February 23, 2023

LEAVE A REPLY

Please enter your comment!
Please enter your name here