Home Uncategorized ಧ್ವನಿ ಇಲ್ಲದ, ನಿರ್ಗತಿಕ ವರ್ಗದವರ ಸಮಸ್ಯೆಗಳ ಪರಿಹರಿಸಲು ಬಜೆಟ್ ನಲ್ಲಿ ವಿವಿಧ ಯೋಜನೆಗಳು ಘೋಷಣೆಯಾಗಲಿದೆ: ಸಿಎಂ...

ಧ್ವನಿ ಇಲ್ಲದ, ನಿರ್ಗತಿಕ ವರ್ಗದವರ ಸಮಸ್ಯೆಗಳ ಪರಿಹರಿಸಲು ಬಜೆಟ್ ನಲ್ಲಿ ವಿವಿಧ ಯೋಜನೆಗಳು ಘೋಷಣೆಯಾಗಲಿದೆ: ಸಿಎಂ ಬೊಮ್ಮಾಯಿ

4
0
bengaluru

2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಧ್ವನಿ ಇಲ್ಲದ ಮತ್ತು ನಿರ್ಗತಿಕ ವರ್ಗದವರ ಸಮಸ್ಯೆಗಳನ್ನು ಪರಿಹರಿಸಲು ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು. ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಧ್ವನಿ ಇಲ್ಲದ ಮತ್ತು ನಿರ್ಗತಿಕ ವರ್ಗದವರ ಸಮಸ್ಯೆಗಳನ್ನು ಪರಿಹರಿಸಲು ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕರು, ರೈತರು, ದಲಿತರು ಮತ್ತು ಬಡ ಜನರ ಸಂಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ಧಪಡಿಸುವುದಾಗಿ ಭರವಸೆ ನೀಡಿದರು.

ಎಲ್ಲಾ ಸಮುದಾಯಗಳಿಗೆ ಆರೋಗ್ಯ ಮತ್ತು ಶಿಕ್ಷಣ, ಉದ್ಯೋಗಗಳ ಸೃಷ್ಟಿ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ಬಜೆಟ್‌ನಲ್ಲಿ ಪ್ರಾಮುಖ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆಂದರು.

bengaluru
bengaluru

LEAVE A REPLY

Please enter your comment!
Please enter your name here