ನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ. ಬೆಂಗಳೂರು: ನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.
ಸೋಮವಾರ ತಡರಾತ್ರಿ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಮಂಗಳವಾರ ಘೋಷಣೆ ಮಾಡಲಾಗಿದೆ. ಯೋಜನೆಯನ್ನು ಕಾರ್ಯಗತಗೊಳಿಸಲು ಎರಡು ವರ್ಷಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಸುಮಾರು ಎರಡು ವರ್ಷಗಳ ಹಿಂದೆ ನಡೆಸಲಾದ ಅಧ್ಯಯನವನ್ನು ಕಾರ್ಯಗತಗೊಳಿಸಲಾಗುತ್ತಿದೆ. ಮಾರ್ಚ್ 2025 ರೊಳಗೆ ಯೋಜನೆ ಪೂರ್ಣಗೊಳ್ಳಬೇಕಿದೆ ಎಂದು ಪ್ರವಾಸೋದ್ಯಮ ನಿರ್ದೇಶಕ ವಿ ರಾಮ್ ಪ್ರಸಾತ್ ಮನೋಹರ್ ಟಿಎನ್‌ಐಇಗೆ ತಿಳಿಸಿದ್ದಾರೆ.
ಈ ಹಿಂದೆ ಸ್ಥಳೀಯರು ಮತ್ತು ಕಾರ್ಯಕರ್ತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ರೋಪ್‌ವೇ ಯೋಜನೆ ಕೈಗೊಳ್ಳುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ನಂದಿಬೆಟ್ಟದ ವಿಚಾರದಲ್ಲಿ ಪಕ್ಷಿವಿಜ್ಞಾನಿಗಳು, ಸಂರಕ್ಷಣಾ ತಜ್ಞರು, ಅರಣ್ಯ ಇಲಾಖೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೂ, ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
12 ಎಕರೆ ಜಾಗದಲ್ಲಿ ರೋಪ್‌ವೇ ಯೋಜನೆ ಕೈಗೆತ್ತಿಕೊಳ್ಳಲಿದ್ದು, ಅದರಲ್ಲಿ 10 ಎಕರೆ ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಕಾಮಗಾರಿ ಆರಂಭವಾಗಲಿದೆ. ಈ ಮಧ್ಯೆ ಇಲಾಖೆಯು ಅರಣ್ಯ ಇಲಾಖೆಯಿಂದ ಅನುಮತಿಗೆ ಅರ್ಜಿ ಸಲ್ಲಿಸಲಿದೆ’ ಎಂದು ಮನೋಹರ್ ತಿಳಿಸಿದರು.
2.93 ಕಿ.ಮೀ ಉದ್ದದ ಈ ಯೋಜನೆಯ ವೆಚ್ಚ 93.40 ಕೋಟಿ ರೂಪಾಯಿಗಳಾಗಿದ್ದು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಒಪ್ಪಂದದಲ್ಲಿ ಹೇಳಲಾಗಿದೆ. ಕಂಪನಿಯು 30 ವರ್ಷಗಳ ರಿಯಾಯಿತಿ ಅವಧಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ ಮಾದರಿಯಲ್ಲಿ ಯೋಜನೆಯನ್ನು ಅಭಿವೃದ್ಧಿಪಡಿಸುತ್ತದೆ.
ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಮಾತನಾಡಿ, ರೋಪ್‌ವೇ ಬೆಟ್ಟದ ತುದಿಗೆ ತಲುಪುವ ಸಮಯವನ್ನು ಕಡಿತಗೊಳಿಸುವುದಲ್ಲದೆ, ಮಾಲಿನ್ಯವನ್ನೂ ಕಡಿಮೆ ಮಾಡುತ್ತದೆ. ಇದು ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಮೇಲಿನ ಮತ್ತು ಕೆಳಗಿನ ಲ್ಯಾಂಡಿಂಗ್ ಸ್ಟೇಷನ್‌ಗಳಲ್ಲಿ ಆದಾಯ ಮತ್ತು ಆದಾಯೇತರ ಸೌಲಭ್ಯಗಳನ್ನು ಸಹ ಯೋಜಿಸಲಾಗಿದೆ. ಈ ಸೌಲಭ್ಯಗಳು ಸ್ಥಳದ ಸುತ್ತಲಿನ ವಿವಿಧ ವಸತಿಗಳಲ್ಲಿ ತಂಗುವ ಪ್ರವಾಸಿಗರಿಗೆ ಸಹ ಲಭ್ಯವಾಗುತ್ತವೆ.