ಬ್ಯಾಂಕುಗಳಿಗೆ ಜಮೆಯಾದ ಹಣದಲ್ಲಿ ನಕಲಿ ನೋಟುಗಳನ್ನು ಪತ್ತೆಹಚ್ಚಿದ ನಂತರ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎಫ್‌ಐಆರ್ ದಾಖಲಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬೆಂಗಳೂರು: ಬ್ಯಾಂಕುಗಳಿಗೆ ಜಮೆಯಾದ ಹಣದಲ್ಲಿ ನಕಲಿ ನೋಟುಗಳನ್ನು ಪತ್ತೆಹಚ್ಚಿದ ನಂತರ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎಫ್‌ಐಆರ್ ದಾಖಲಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
100 ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ, ಮಣಿಪಾಲ, ಹುಬ್ಬಳ್ಳಿ ಬ್ಯಾಂಕ್ ಶಾಖೆಗಳು ಮತ್ತು ಬೆಂಗಳೂರಿನ ಮಲ್ಲೇಶ್ವರಂ ಶಾಖೆಯಲ್ಲಿ ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಬ್ಯಾಂಕ್‌ಗಳು ಆರ್‌ಬಿಐಗೆ ರವಾನೆ ಮಾಡಿದ ಹಣದಲ್ಲಿ ನಕಲಿ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಈ ಸಂಬಂಧ ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಯುಬಿಐ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಆರ್‌ಬಿಐ ಮ್ಯಾನೇಜರ್ ಆನಂದ್ ದೂರು ದಾಖಲಿಸಿದ್ದರು.
ವಿಚಾರಣೆಗೆ ಹಾಜರಾಗುವಂತೆ ಬ್ಯಾಂಕ್‌ಗಳ ವ್ಯವಸ್ಥಾಪಕರಿಗೆ ನೋಟಿಸ್ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.