Home Uncategorized ನಮ್ಮ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣ: ಐವರ ವಿರುದ್ಧ ಎಫ್ಐಆರ್ ದಾಖಲು

ನಮ್ಮ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣ: ಐವರ ವಿರುದ್ಧ ಎಫ್ಐಆರ್ ದಾಖಲು

11
0

ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು: ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮೃತ ತೇಜಸ್ವಿನಿ ಪತಿ ಲೋಹಿತ್ ಕುಮಾರ್ ಅವರು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಈ ಸಂಬಂಧ ಸೈಟ್ ಇಂಜಿನಿಯರ್ಸ್‌, ಕಂಟ್ರ್ಯಾಕ್ಟರ್ಸ್‌, BMRCL ಆಫೀಸರ್ಸ್‌, ಸೈಟ್ ಇನ್‌ಚಾರ್ಜ್‌ ಆಫೀಸರ್ಸ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

Mother and child died as a construction pillar of Namma Metro fell near Nagavara in Bengaluru ⁦@XpressBengaluru⁩ ⁦@NewIndianXpress⁩ ⁦@Cloudnirad⁩ ⁦@ramupatil_TNIE⁩ ⁦@AshwiniMS_TNIE⁩ ⁦@shibasahu2012⁩ ⁦@vinodkumart5⁩ ⁦@gadekal2020pic.twitter.com/rHSRPOF8XW
— Shashidhar Byrappa (@ShashidharNIE) January 10, 2023

ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ 35 ವರ್ಷದ ತೇಜಸ್ವಿನಿ ಹಾಗೂ ವಿಹಾನ್ (2 ವರ್ಷ 6 ತಿಂಗಳು) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಅದೃಷ್ಟವಶಾತ್ ತಂದೆ ಹಾಗೂ ಮಗಳು ಪ್ರಾಣಪಾಯದಿಂದ ಪಾರಾಗಿದ್ದರು.

ಈ ಘಟನೆ ಸಂಬಂಧ ಮೃತರ ಕುಟುಂಬಸ್ಥರಿಗೆ ಸಿಎಂ ಬೊಮ್ಮಾಯಿ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್ ಸಿಎಲ್ ನಿಂದ  20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಿತ್ತು.

ಇದನ್ನೂ ಓದಿ: ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 20 ಲಕ್ಷ, ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರ

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್, ಇದೊಂದು ದುರಾದೃಷ್ಟಕರ ಘಟನೆಯಾಗಿದೆ. ಮೆಟ್ರೋ ನಿರ್ಮಾಣದಲ್ಲಿ ಸಾಧ್ಯವಾದಷ್ಟು ಅತ್ಯಂತ ಹೆಚ್ಚಿನ ಗುಣಮಟ್ಟವನ್ನು ಅನುಸರಿಸುತ್ತಿದ್ದೇವೆ. ಘಟನೆ ಸಂಬಂಧ ವಿಸ್ತೃತವಾಗಿ ತನಿಖೆ ನಡೆಸಲಾಗುವುದು, ಒಂದು ವೇಳೆ ತಾಂತ್ರಿಕ ದೋಷ ಅಥವಾ ಕಾರ್ಮಿಕರ ತಪ್ಪಿನಿಂದಾದ ಅವಘಡ ಎಂದು ಕಂಡುಬಂದಲ್ಲಿ ಮುಂದೆ ಇಂತಹ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

LEAVE A REPLY

Please enter your comment!
Please enter your name here