Home Uncategorized ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

28
0

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶುಕ್ರವಾರದಿಂದ ಎರಡು ದಿನಗಳ ಕಾಲ ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶುಕ್ರವಾರದಿಂದ ಎರಡು ದಿನಗಳ ಕಾಲ ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೂಲಗಳ ಪ್ರಕಾರ, ‘ಮಾರ್ಚ್ 17 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ನಡ್ಡಾ ಅವರು ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ರ‍್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮರುದಿನ ಅವರು ಮತ್ತೆ ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ತುಮಕೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ’. 

ಇದರೊಂದಿಗೆ ಹಲವು ಸಭೆಗಳು ನಡೆಯಲಿವೆ. ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆ ತುಂಬಲು ಅವರನ್ನು ಭೇಟಿಯಾಗಲಿದ್ದಾರೆ.

ಮೇ ತಿಂಗಳಿಗೂ ಮುನ್ನ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಹಲವು ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನ ವಂಶಾಡಳಿತ, ಜಾತಿ ರಾಜಕಾರಣವನ್ನು ಕೊನೆಗಾಣಿಸಿ: ಮತದಾರರಿಗೆ ಜೆಪಿ ನಡ್ಡಾ ಮನವಿ

ಮಾರ್ಚ್ 12 ರಂದು ಕರ್ನಾಟಕಕ್ಕೆ ಬಂದಿದ್ದ ಪ್ರಧಾನಿ ಮೋದಿ ಅವರು ಮಂಡ್ಯ ಜಿಲ್ಲೆಯಲ್ಲಿ 2 ಕಿಲೋಮೀಟರ್ ಉದ್ದದ ರೋಡ್ ಶೋ ನಡೆಸಿದರು. ಮಂಡ್ಯದಲ್ಲಿ ರೋಡ್ ಶೋ ನಡೆಸುತ್ತಿದ್ದ ಮೋದಿ ಮೇಲೆ ಬಿಜೆಪಿ ಬೆಂಬಲಿಗರು ಹಾಗೂ ಸ್ಥಳೀಯರು ಪುಷ್ಪವೃಷ್ಟಿ ಮಾಡಿದರು.

ಅಲ್ಲದೆ, ಪ್ರಧಾನಿ ಮೋದಿಯವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಮತ್ತು ಐಐಟಿ ಧಾರವಾಡವನ್ನು ದೇಶಕ್ಕೆ ಸಮರ್ಪಿಸಿದರು ಮತ್ತು ಇತರ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

LEAVE A REPLY

Please enter your comment!
Please enter your name here