Home Uncategorized ನಾಳೆ ಮಂಗಳೂರಿಗೆ ಅಮಿತ್ ಶಾ; ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದು

ನಾಳೆ ಮಂಗಳೂರಿಗೆ ಅಮಿತ್ ಶಾ; ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದು

5
0
bengaluru

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಂಗಳೂರಿಗೆ ಆಗಮಿಸುತ್ತಿದ್ದು, ಭದ್ರತಾ ದೃಷ್ಟಿಯಿಂದ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಡ್ ಶೋ ರದ್ದುಗೊಳಿಸಲಾಗಿದೆ ಎಂದು ಭಾರತೀಯ ಜನತಾ ಪಕ್ಷದ ಸ್ಥಳೀಯ ಘಟಕ… ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಂಗಳೂರಿಗೆ ಆಗಮಿಸುತ್ತಿದ್ದು, ಭದ್ರತಾ ದೃಷ್ಟಿಯಿಂದ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಡ್ ಶೋ ರದ್ದುಗೊಳಿಸಲಾಗಿದೆ ಎಂದು ಭಾರತೀಯ ಜನತಾ ಪಕ್ಷದ ಸ್ಥಳೀಯ ಘಟಕ ಶುಕ್ರವಾರ ತಿಳಿಸಿದೆ.

ಹಗಲಿನಲ್ಲಿ ಪುತ್ತೂರು ತಾಲೂಕಿನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿ ಖಾ, ಸಂಜೆಯ ವೇಳೆಗೆ ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.

ನಗರದಲ್ಲಿ ಕೇಂದ್ರ ಗೃಹ ಸಚಿವರ ರೋಡ್ ಶೋ ನಡೆಸಲು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಭದ್ರತೆಯ ಕಾರಣದಿಂದ ರದ್ದುಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರಿನ ಕೆಂಜಾರು ಶ್ರೀದೇವಿ ಕಾಲೇಜಿನಲ್ಲಿ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಶಾ ಭಾಗವಹಿಸಲಿದ್ದಾರೆ.

bengaluru

ಇದನ್ನು ಓದಿ: ಈ ಬಾರಿಯ ಚುನಾವಣೆ ಟಿಪ್ಪು v/s ಸಾವರ್ಕರ್ ಮಧ್ಯೆ, ಈ ದೇಶಕ್ಕೆ ಟಿಪ್ಪು ಬೇಕಾ, ಸಾವರ್ಕರ್ ಬೇಕಾ ಬನ್ನಿ ಚರ್ಚೆ ಮಾಡೋಣ ಸಿದ್ದರಾಮಣ್ಣ: ನಳಿನ್ ಕುಮಾರ್ ಕಟೀಲು

ಸಂಜೆ ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭವನ್ನು ಬಿಜೆಪಿಯ ಹಿರಿಯ ಮುಖಂಡರು ಉದ್ಘಾಟಿಸಲಿದ್ದಾರೆ.

ಧರ್ಮಶ್ರೀ ಪ್ರತಿಷ್ಠಾನ ನಿರ್ಮಿಸಿರುವ ಭಾರತ ಮಾತಾ ಮಂದಿರವನ್ನು ಅಮಿತ್ ಶಾ ಉದ್ಘಾಟಿಸಲಿದ್ದು, ಬಳಿಕ ಹನುಮಗಿರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

bengaluru

LEAVE A REPLY

Please enter your comment!
Please enter your name here