ಹಾವೇರಿ:
ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಇಂದು ನಡೆದಿದೆ.

ಬ್ಯಾಡಗಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಲಾ ಕಟ್ಟಡ ಕಾಮಗಾರಿಯ ಅಡಿಪಾಯಕ್ಕೆ ತೆಗೆದ ಗುಂಡಿಯಲ್ಲಿ ಬಿದ್ದು ಮಕ್ಕಳು ಸಾವನ್ನಪ್ಪಿದ್ದಾರೆ.
ಗೋವಾದಿಂದ ದೇವಿಹೊಸೂರು ಗ್ರಾಮದ ಅಜ್ಜನ ಮನೆಗೆ ಬಂದಿದ್ದ ಇನಾಯತ್ ಹಾವಣಗಿ ಅವರ ಮಕ್ಕಳಾದ ಸೈಯದ್ ಅಕ್ಮಲ್ (8), ಸೈಯದ್ ಅಶ್ಫಾಕ್ (10) ಹಾಗೂ ಕುಂಬಾರ ಓಣಿಯ ಜಾಫರ್ ಅನಾಮುಲ್ಲಾ ಸವಣೂರ (10) ಮೃತಪಟ್ಟ ಮಕ್ಕಳು.