Home Uncategorized ನೇಕಾರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ: ನೇಕಾರ ಸಮ್ಮಾನ್ ಯೋಜನೆಗೆ ಡಿ. 16ರಂದು ಸಿಎಂ ಬೊಮ್ಮಾಯಿ...

ನೇಕಾರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ: ನೇಕಾರ ಸಮ್ಮಾನ್ ಯೋಜನೆಗೆ ಡಿ. 16ರಂದು ಸಿಎಂ ಬೊಮ್ಮಾಯಿ ಚಾಲನೆ

24
0

ಬೆಂಗಳೂರು: ಕೈಮಗ್ಗ ನೇಕಾರರಿಗೆ (Weavers) ತಲಾ 5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆ (Samman Scheme) ಗೆ ನಾಳೆ (ಡಿ. 16) ಚಾಲನೆ ದೊರೆಯಲಿದೆ. ಕೈಮಗ್ಗ ನೇಕಾರರ ಚಟುವಟಿಕೆಗಳ ಪಾರಂಪರಿಕ ಕಲೆ ಮತ್ತು ಅವರ ಶ್ರಮವನ್ನು ಪರಿಗಣಿಸಿ ಹಾಗೂ ಕೋವಿಡ್-19 ಮಹಾಮಾರಿ ಮತ್ತು ಆರ್ಥಿಕ ಹಿನ್ನೆಡೆಯಿಂದ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ 2020-21 ನೇ ಸಾಲಿನಿಂದ ಅನ್ವಯವಾಗುವಂತೆ, ‘ನೇಕಾರ ಸಮ್ಮಾನ್’ ಎಂಬ ಹೊಸ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದು, ಇದು ಕೈಮಗ್ಗ ನೇಕಾರರಿಗೆ ಸಹಾಯಕವಾಗಲಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ (shankar patil munenakoppa) ಅವರು ತಿಳಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರು ನಾಳೆ 16-12-2022 ರಂದು ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಪ್ರತಿ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ರೂ.5,000/- ಗಳಂತೆ ಒಟ್ಟು ರೂ.2343.20 ನೇಕಾರರ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮವು ಸಿಎಂ ಬೊಮ್ಮಾಯಿ ಅವರ ಗೃಹಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉದ್ಘೋಷಿತ ಅಪರಾಧಿಗಳ ಸುಳಿವು ಕೊಟ್ಟವರಿಗೆ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ. ಬಹುಮಾನ

2021-22 ನೇ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ 49,544 ನೇಕಾರರಿಗೆ ರೂ.990.88 ಲಕ್ಷಗಳನ್ನು ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗಿದೆ. 2022-23 ನೇ ಸಾಲಿನ ಆಯವ್ಯಯದನ್ವಯ ನೋಂದಾಯಿತ ಕೈಮಗ್ಗ ನೇಕಾರರಿಗೆ “ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ರೂ.2,000/- ಗಳಿಂದ ರೂ.5,000/- ಗಳಿಗೆ ಹೆಚ್ಚಿಸಿದೆ. ಇಲ್ಲಿಯವರೆಗೆ 46,864 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾಹಿತಿ ನೀಡಿದ್ದಾರೆ.

‘ದೇವದಾಸಿ ಮಕ್ಕಳಿಗೆ ತಾಯಿ ಹೆಸರೇ ಅಂತಿಮ’ ನಿರ್ಣಯಕ್ಕೆ ಸರ್ಕಾರದಿಂದ ಸಹಮತ

ದೇವದಾಸಿ ಮಕ್ಕಳಿಗೆ ತಂದೆ ಹೆಸರು ಕೇಳುವಂತಿಲ್ಲ, ತಾಯಿ ಹೆಸರೇ ಅಂತಿಮ ಎಂಬ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ನಿರ್ಣಯ ಕೈಗೊಳ್ಳಲಾಗಿದ್ದು, ಇದಕ್ಕೆ ಕರ್ನಾಟಕ ಸರ್ಕಾರವೂ ಸಹಮತ ಸೂಚಿಸಿದೆ. ರಾಜ್ಯದಲ್ಲಿ ದೇವದಾಸಿಯರ 45 ಸಾವಿರ ಮಕ್ಕಳಿದ್ದು, ಶಾಲಾ ಕಾಲೇಜು ಹಾಗೂ ಸರ್ಕಾರಿ ದಾಖಲೆಗಳಲ್ಲಿ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ಸೇರಿದಂತೆ ಯಾವುದೇ ದಾಖಲೆಯಲ್ಲಿ ತಾಯಿಯ ಹೆಸರನ್ನೇ ಅಂತಿಮವಾಗಿಸುವ ನಿರ್ಣಯ ಕೈಗೊಳ್ಳಲಾಗಿದೆ.

ದೇವದಾಸಿ ಮಕ್ಕಳನ್ನು ಶಾಲೆಗೆ ಸೇರಿಸುವ ವೇಳೆ ಹಾಗೂ ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ಸರ್ಕಾರಿ ದಾಖಲೆಗಳಲ್ಲಿ ತಂದೆ ಹೆಸರು ದಾಖಲಿಸುವಂತೆ ಕಿರುಕುಳ, ಒತ್ತಾಯ, ಅರ್ಜಿ ತಿರಸ್ಕಾರ ಮಾಡುವ ಆರೋಪಗಳು ಕೇಳಿಬಂದಿದ್ದವು. ಹೀಗಾಗಿ ದೇವದಾಸಿ ಮಕ್ಕಳಿಗೆ ತಂದೆ ಹೆಸರು ಇಲ್ಲದಿದ್ದರೆ ತಾಯಿ ಹೆಸರು ನಮೂದಿಸಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

LEAVE A REPLY

Please enter your comment!
Please enter your name here