Home Uncategorized ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ ಖಚಿತ: ಸಿಎಂ ಬೊಮ್ಮಾಯಿ ಭರವಸೆ

ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ ಖಚಿತ: ಸಿಎಂ ಬೊಮ್ಮಾಯಿ ಭರವಸೆ

18
0
bengaluru

ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ: ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜ್ ಕಮಿಟಿಯನ್ನು  4-5 ವರ್ಷಗಳ ಹಿಂದೆ ರಚಿಸಲಾಗಿತ್ತು.  ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದವರನ್ನು ಕೋಟಾದ ಅಡಿಯಲ್ಲಿ ಸೇರಿಸಬೇಕೆಂದು ಹಿಂದುಳಿದ ವರ್ಗಗಳ ಸಮಿತಿ ವರದಿಯಲ್ಲಿ ಹೇಳಿದೆ. ಪಂಚಮಸಾಲಿ, ಒಕ್ಕಲಿಗರಿಗೆ ಒಂದು ವಾರದೊಳಗೆ ಮೀಸಲಾತಿ ಒದಗಿಸುವ ಕೆಲಸ ಮಾಡಲಾಗುವುದು ಎಂದರು.

ಇದನ್ನೂ ಓದಿ: ಫೆಬ್ರವರಿ ಎರಡನೆ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ- ಸಿಎಂ ಬೊಮ್ಮಾಯಿ

ಮೀಸಲಾತಿ ವಿವಾದದ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರ ರೈತರು, ಬಡವರು, ಪರಿಶಿಷ್ಟ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಗಮನ ನೀಡಿದೆ. ಪತನದ ಅಂಚಿನಲ್ಲಿರುವ ಕಾಂಗ್ರೆಸ್  ಕಾಂಗ್ರೆಸ್ ಉಚಿತ ಘೋಷಣೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದರು. 

bengaluru

We have done this within one week (reservation for Panchamasalis and Vokkaligas), Congress is trying to gain political mileage from this entire quota row: Karnataka CM Basavaraj Bommai on the issue of reservation pic.twitter.com/O6b2NHANbG
— ANI (@ANI) January 14, 2023

bengaluru

LEAVE A REPLY

Please enter your comment!
Please enter your name here